ಒಂಟಾರಿಯೊ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೇಶದಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದಾರೆ. ಇದಕ್ಕೆ ಕೆನಡಾ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡಿಯೋ ಬೆಂಬಲ ನೀಡಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಭಾರತದಲ್ಲಿನ ರೈತರ ಪ್ರತಿಭಟನೆಗಳ ಕುರಿತು ಹೇಳಿಕೆ ನೀಡಿದ ಮೊದಲ ಅಂತಾರಾಷ್ಟ್ರೀಯ ನಾಯಕ ಎಂಬ ಹೆಗ್ಗಳಿಕೆಗೆ ಜಸ್ಟಿನ್ ಟ್ರುಡಿಯೋ ಪಾತ್ರರಾಗಿದ್ದಾರೆ.
ಜಸ್ಟಿನ್ ಟ್ರುಡಿಯೋ ಅವರು ಮೊದಲು ಗುರು ನಾನಕ್ ಜಯಂತಿಯಂದು ಕೆನಡಾ ನಾಗರಿಕರಿಗೆ ಮುಖ್ಯವಾಗಿ ಸಿಖ್ ಪಂಥೀಯರಿಗೆ ಶುಭಾಶಯ ಕೋರಿದ್ದಾರೆ. ಬಳಿಕ ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು, 'ರೈತರ ಪ್ರತಿಭಟನೆಗಳು ನಡೆಯುತ್ತಿರುವ ಭಾರತದ ಕುರಿತಾದ ಸುದ್ದಿಗಳ ಬಗ್ಗೆ ಉಲ್ಲೇಖಿಸದೆ ನನ್ನ ಮಾತುಗಳನ್ನು ಆರಂಭಿಸುವುದು ಸರಿಯಾಗದು. ಪರಿಸ್ಥಿತಿ ಕಳವಳಕಾರಿಯಾಗಿದೆ. ಪ್ರತಿಭಟಿಸುವ ಹಕ್ಕನ್ನು ಜನರಿಗೆ ನೀಡಬೇಕು. ಶಾಂತಿಯುತವಾಗಿ ಪ್ರತಿಭಟನೆ ನಡೆಯಬೇಕು. ಭಾರತದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಅವರಿಗೆ ಅವಕಾಶ ನೀಡಬೇಕು ಎಂದು ಪ್ರಧಾನಿ ಮೋದಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ನಾವೆಲ್ಲರೂ ನಮ್ಮ ಕುಟುಂಬ ಮತ್ತು ಸ್ನೇಹಿತರ ಬಗ್ಗೆ ಚಿಂತಿತರಾಗಿದ್ದೇವೆ. ಶಾಂತಿಯುತ ಪ್ರತಿಭಟನಾಕಾರರ ಹಕ್ಕುಗಳನ್ನು ಕೆನಡಾ ಯಾವತ್ತೂ ಸಮರ್ಥಿಸುತ್ತದೆ. ಭಾರತೀಯ ಪ್ರಾಧಿಕಾರಗಳಿಗೆ ತಿಳಿಸಲು ವಿವಿಧ ರೀತಿಯಲ್ಲಿ ಪ್ರಯತ್ನಿಸಿದ್ದೇವೆ. ನಾವೆಲ್ಲರೂ ಜತೆಯಲ್ಲಿರಬೇಕಾದ ಕ್ಷಣವಿದು” ಎಂದು ಹೇಳಿದ್ದಾರೆ.
PublicNext
01/12/2020 03:22 pm