ಮುಂಬೈ: ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಅವರು ಮಂಗಳವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸದಲ್ಲಿ ಶಿವಸೇನೆ ಸೇರ್ಪಡೆಯಾಗಿದ್ದಾರೆ.
ಉದ್ಧವ್ ಠಾಕ್ರೆ ಅವರ ಪತ್ನಿ ರಶ್ಮಿ ಠಾಕ್ರೆ ಅವರು ನಟಿಯ ಕೈಗೆ 'ಶಿವ ಬಂಧನ್' ಎಂಬ ಎಳೆಯನ್ನು ಕಟ್ಟುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಮುಂಬೈ ಮೇಯರ್ ಕಿಶೋರಿ ಪೆಡ್ನೆಕರ್ ಮತ್ತು ಇತರ ಹಿರಿಯ ಸೇನಾ ಮುಖಂಡರು ಉಪಸ್ಥಿತರಿದ್ದರು.
PublicNext
01/12/2020 03:47 pm