ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋವಿಡ್-19ಗೆ ಬಿಜೆಪಿ ಸಂಸದ ಅಭಯ್ ಭಾರದ್ವಾಜ್ ಬಲಿ

ಗಾಂಧಿನಗರ: ಗುಜರಾತ್‌ನ ಬಿಜೆಪಿ ರಾಜ್ಯಸಭಾ ಸದಸ್ಯ ಅಭಯ್ ಭಾರದ್ವಾಜ್ ಅವರು ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ.

ಭಾರದ್ವಾಜ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್‍ಕೋಟ್‌ನ ಆಸ್ಪತ್ರೆಯ ಐಸಿಯುನಲ್ಲಿ ಒಂದು ತಿಂಗಳ ಕಾಲ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಎರಡು ತಿಂಗಳ ಹಿಂದೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.

ಈ ಮೂಲಕ ಗುಜರಾತ್ ಇಬ್ಬರು ರಾಜ್ಯಸಭಾ ಸದಸ್ಯರನ್ನು ಕಳೆದುಕೊಂಡಂತಾಗಿದೆ. ನವೆಂಬರ್ 26ರಂದು ರಾಜ್ಯಸಭಾ ಸದಸ್ಯ, ಕಾಂಗ್ರೆಸ್‌ನ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರು ಕೊನೆಯುಸಿರೆಳೆದಿದ್ದರು. ಭಾರದ್ವಾಜ್ ಅವರು ರಾಜ್‍ಕೋಟ್‍ನ ಬಿಜೆಪಿ ಹಿರಿಯ ನಾಯಕರಾಗಿದ್ದು, ವೃತ್ತಿಯಲ್ಲಿ ವಕೀಲರಾಗಿದ್ದರು. ಜುಲೈನಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

Edited By : Vijay Kumar
PublicNext

PublicNext

01/12/2020 08:54 pm

Cinque Terre

105.48 K

Cinque Terre

3

ಸಂಬಂಧಿತ ಸುದ್ದಿ