ಬೆಂಗಳೂರು: ಮಾಜಿ ಸಚಿವರನ್ನ ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟು ಹಲ್ಲೆ ನಡೆಸಿದ ಆಘಾತಕಾರಿ ಘಟನೆಯೊಂದು ಕೋಲಾರದಲ್ಲಿ ನಡೆದಿದೆ.
ಮಾಜಿ ಸಚಿವ ವರ್ತೂರ್ ಪ್ರಕಾಶ್ ಅವರನ್ನು ಅಪಹರಿಸಿದ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ದೂರು ನೀಡಿರುವ ವರ್ತೂರ್ ಪ್ರಕಾಶ್ ಅವರು, "ಕೆಲ ದುಷ್ಕರ್ಮಿಗಳು ಹಲ್ಲೆ ಮಾಡಿ ನನ್ನ ಬಳಿ 30 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಚಾಲಕ ಸುನೀಲ್ ಮೇಲೂ ಹಲ್ಲೆಯಾಗಿದ್ದು, ಘಟನೆ ನಡೆದ ಸ್ಥಳದಿಂದ ತಪ್ಪಿಸಿಕೊಂಡಿದ್ದಾನೆ. ಮೂರು ದಿನಗಳ ಬಳಿಕ ಹೊಸಕೋಟೆಯಲ್ಲಿ ನನ್ನನ್ನು ಬಿಟ್ಟು ಹೋಗಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.
PublicNext
01/12/2020 09:14 pm