ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೋಹತ್ಯೆ ನಿಷೇಧ ಕಾಯ್ದೆಗೆ ಸಿದ್ದರಾಮಯ್ಯ ವಿರೋಧ

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗೋಹತ್ಯೆ ನಿಷೇಧ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಗೋ ಹತ್ಯೆ ನಿಷೇಧ ಕಾಯಿದೆ ಕುರಿತು ಮುಸ್ಲಿಂ ಸಮುದಾಯದ ಮುಖಂಡರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಶಾಸಕರಾದ ರಿಜ್ವಾನ್ ಅರ್ಷದ್ ಅವರು ಜೊತೆಗಿದ್ದರು. ಸಭೆಯ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ''ನಾನೂ ಸಗಣಿ ಬಾಚಿದ್ದೇನೆ, ಗಂಜಲ ಎತ್ತಿದ್ದೇನೆ. ಬಿಜೆಪಿಯ ಯಾವ ನಾಯಕರು ಈ ಕೆಲಸ ಮಾಡಿದ್ದಾರೆಯೇ? ಪಶು ಸಾಕಾಣಿಕೆ ಬಗ್ಗೆ ಅವರಿಗೇನು ಗೊತ್ತಿದೆ? ಹಸು- ಎತ್ತುಗಳಿಗೆ ವಯಸ್ಸಾದ ಮೇಲೆ ಅವನ್ನು ರೈತರು ಏನು ಮಾಡಬೇಕು? ಬಿಜೆಪಿಯವರ ಮನೆ ಬಾಗಿಲಿಗೆ ಕೊಂಡುಹೋಗಿ ಬಿಟ್ಟು ಬರಬೇಕೇ'' ಎಂದು ಪ್ರಶ್ನಿಸಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆಯನ್ನು ಬಿಜೆಪಿ ಆಡಳಿತವಿರುವ ಗೋವಾದಲ್ಲಿ ಏಕೆ ಜಾರಿಗೊಳಿಸಿಲ್ಲ? ಕರ್ನಾಟಕದಲ್ಲಿಯೇ ಏಕೆ? ಕಾಯ್ದೆ ಜಾರಿಯಾದರೆ ತಾವು ಕಷ್ಟ ನಷ್ಟಕ್ಕೆ ಈಡಾಗುತ್ತೇವೆ ಎಂಬ ಭಯದಿಂದ ಮುಸ್ಲಿಂ ಸಮುದಾಯದ ಮುಖಂಡರು ನನ್ನ ಬಳಿಗೆ ಬಂದಿದ್ದರು. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಲ್ಲಿ ನಾವು ವಿರೋಧಿಸಲಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಸಿಎಂ ಮಾತಿಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದರೆ, ಇನ್ನು ಕೆಲವರು ಅಸಮಾಧಾನ ಹೊರ ಹಾಕಿದ್ದಾರೆ. 'ಮನೆಯಲ್ಲಿ ತಂದೆ-ತಾಯಿ ನಾವು ಚಿಕ್ಕವರಿರುವಾಗ ಚೆನ್ನಾಗಿ ಸಾಕುತ್ತಾರೆ. ವಯಸ್ಸಾದ ಮೇಲೆ ಏನು ಮಾಡಬೇಕು ಅನ್ನುವ ಹಾಗೆ ಇದೆ ನಿಮ್ಮ ಪ್ರಶ್ನೆ' ಎಂದು ನೆಟ್ಟಿಗರೊಬ್ಬರು ರಿಟ್ವೀಟ್ ಮಾಡಿದ್ದಾರೆ. ಇನ್ನೊಬ್ಬರು, 'ನಿಮಗೂ ವಯಸ್ಸಾಯಿತು ನಿಮ್ಮ ಮಕ್ಕಳು ನಿಮಗೆ ಏನು ಮಾಡುತ್ತಾರೆ ನೋಡಬೇಕು' ಎಂದು ಅಸಮಾಧಾನ ಹೊರ ಹಾಕಿದ್ದಾರೆ.

Edited By : Vijay Kumar
PublicNext

PublicNext

01/12/2020 10:41 pm

Cinque Terre

63.38 K

Cinque Terre

15

ಸಂಬಂಧಿತ ಸುದ್ದಿ