ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತ ಹೋರಾಟ ನಮ್ಮ ಆಂತರಿಕ ವಿಚಾರ: ಅದೆಲ್ಲ ನಿಮಗ್ಯಾಕೆ? ಎಂದ ಶಿವಸೇನೆ ಸಂಸದೆ

ಮುಂಬೈ: ಕಳೆದೊಂದು ವಾರದಿಂದ ಪಂಜಾಬ್, ಹರಿಯಾಣ ರೈತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಬೆಂಬಲಿಸಿ ಮಾತನಾಡಿದ್ದರು. ಈ ಬಗ್ಗೆ ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ ಗರಂ ಆಗಿದ್ದಾರೆ. ಭಾರತದ ಆಂತರಿಕ ಸಮಸ್ಯೆಗಳನ್ನು ಬಳಸಿಕೊಂಡು ರಾಜಕೀಯ ಮಾಡಬೇಡಿ ಎಂದು ಜಸ್ಟಿನ್ ಟ್ರುಡೋ ಹೇಳಿಕೆಗೆ ತಿರುಗುಬಾಣ ಬಿಟ್ಟಿದ್ದಾರೆ.

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯಿದೆಗಳನ್ನು ವಿರೋಧಿಸಿ ಕಳೆದ ಆರು ದಿನಗಳಿಂದ ಬೃಹತ್ ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಕೆನಡಾ ಪ್ರಧಾನಿ ಜಸ್ಟೀನ್ ಟ್ರಡೋ ಅವರಿಗೆ ಪ್ರಿಯಾಂಕಾ ಚತುರ್ವೇದಿ ಆತ್ಮೀಯ ಜಸ್ಟಿನ್ ಟ್ರುಡೊ, ನಿಮ್ಮ ಕಾಳಜಿಯು ನಮಗೆ ತಿಳಿದಿದೆ. ಆದರೆ ಭಾರತ ಆಂತರಿಕ ವಿಷಯವು ಬೇರೆ ರಾಷ್ಟ್ರಗಳ ರಾಜಕೀಯಕ್ಕೆ ಮೇವು ಅಲ್ಲ. ನಾವು ನಿಮ್ಮನ್ನು ಗೌರವಿಸುವ ಹಾಗೆ ನಮ್ಮನ್ನು ಗೌರವಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಇದೇ ವೇಳೆ, ಇತರ ದೇಶಗಳು ಅಭಿಪ್ರಾಯ ವ್ಯಕ್ತಪಡಿಸುವುದು ಸರಿಯೆಂದು ಕಂಡುಕೊಳ್ಳುವ ಮೊದಲು ಈ ಬಿಕ್ಕಟ್ಟನ್ನು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿನಂತಿಸುತ್ತೇನೆ ಎಂದು ರಾಜ್ಯಸಭೆ ಸದಸ್ಯೆ ಪ್ರಿಯಾಂಕಾ ಚತುರ್ವೇದಿ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

02/12/2020 01:10 pm

Cinque Terre

75.93 K

Cinque Terre

6