ವಿಜಯಪುರ: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಇದೇ ಡಿಸೆಂಬರ್ 5ರಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಆದರೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡ ಪರ ಸಂಘಟನೆಗಳಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕರು, 'ವಿಜಯಪುರದಲ್ಲಿದು ಹೇಗೆ ಬಂದ್ ಮಾಡ್ತರೋ ನಾನು ನೋಡುತ್ತೇನೆ. ತಾಕತ್ ಇದ್ದರೆ ವಿಜಯಪುರನವನ್ನ ಬಂದ್ ಮಾಡಿ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ಅವರು ಬಂದ್ ವಿಫಲಗೊಳಿಸಲು ಏನೆಲ್ಲಾ ಮಾಡಬೇಕೆಂದು ವಿಜಯಪುರ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಫ. ಗು. ಹಳಕಟ್ಟಿ ಭವನದಲ್ಲಿ ಇಂದು ಪೂರ್ವಭಾವಿ ಸಭೆ ನಡೆಸಿದರು.
PublicNext
02/12/2020 11:26 pm