ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾನುವಾರವೇ ಸಂಪುಟ ವಿಸ್ತರಣೆ- ಬಿಎಸ್‌ವೈ ಪ್ಲಾನ್ ಒಪ್ಪುತ್ತಾ ಹೈಕಮಾಂಡ್!

ಬೆಂಗಳೂರು: ಕೊನೆಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದ್ದು, ಡಿಸೆಂಬರ್ 6ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

ಬೆಳಗಾವಿ ಕಾರ್ಯಕಾರಿಣಿಗೆ ಕರ್ನಾಟಕ ರಾಜ್ಯದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದಾರೆ. ಈ ಸಭೆಯ ಬಳಿಕ ಸಿಎಂ ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅರುಣ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಮಂತ್ರಿಗಿರಿ ಆಕಾಂಕ್ಷಿಗಳು ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ ಸೋಮವಾರದಿಂದ ಅಧಿವೇಶನ ಆರಂಭವಾಗಲಿದೆ ಹಾಗೂ ಬಿಬಿಎಂಪಿ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಭಾನುವಾರವೇ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದೆ ಎಂಬ ಮಾಹಿತಿ ಲಭಿಸಿದೆ. ಆದರೆ ಸಿಎಂ ಯಡಿಯೂರಪ್ಪ ಅವರ ಪ್ಲಾನ್್ಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಕೊಡುತ್ತಾ ಎನ್ನುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

Edited By : Vijay Kumar
PublicNext

PublicNext

03/12/2020 04:38 pm

Cinque Terre

57.71 K

Cinque Terre

2

ಸಂಬಂಧಿತ ಸುದ್ದಿ