ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿ ಎಂಬ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆಯನ್ನು ಪುತ್ರಿ ಸೃಷ್ಟಿ ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿ.ಸಿ.ಪಾಟೀಲ್ ಅವರು ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿ ಅಂತ ಹೇಳಿರುವುದರಲ್ಲಿ ತಪ್ಪೇನಿದೆ? ಜೀವ ಮತ್ತು ಜೀವನ ಇರೋದೇ ಒಂದು. ಇದ್ದು ಜಯಸಬೇಕು ಹೊರತು ಆತ್ಮಹತ್ಯೆಯನ್ನು ಮಾಡಿಕೊಳ್ಳುವುದು ಸರಿ ಅಲ್ಲ. ಅವರು ರೈತರಾಗಲಿ ಅಥವಾ ಬೇರೆ ಯಾರೇ ಆಗಲಿ ಆತ್ಮಹತ್ಯೆಗೆ ಶರಣಾದಾಗ ಅವರ ಹೆಂಡತಿ ಮಕ್ಕಳು ಹಾಗೂ ಸಂಬಂಧಿಕರ ಗತಿ ಏನು ಎಂದು ಪ್ರಶ್ನಿಸಿದ್ದಾರೆ.
PublicNext
03/12/2020 05:12 pm