ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತ, ರಾಜಕಾರಣಿಗಳಂತೆ ಗೋಸುಂಬೆ ವ್ಯಕ್ತಿತ್ವದವನಲ್ಲ: ಬಿ.ಸಿ.ಪಾಟೀಲ್‌ಗೆ ಎಚ್‌ಡಿಕೆ ತಿರುಗೇಟು

ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂಬ ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಾತ್ಮಕ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿ, ಬಹಿರಂಗವಾಗಿ ರೈತ ಸಮುದಾಯದ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ..

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ, ಕೃಷಿ ಸಚಿವರೇ ರೈತ ಸಮುದಾಯದ ವಿರುದ್ಧ ಎಲುಬಿಲ್ಲದ ನಾಲಿಗೆ ಹರಿ ಬಿಟ್ಟಿರುವುದು ಖಂಡನೀಯ. ರೈತ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಆಗ್ರಹಿಸುತ್ತೇನೆ' ಎಂದು ಆಗ್ರಹಿಸಿದ್ದಾರೆ.

'ರೈತ, ರಾಜಕಾರಣಿಗಳಂತೆ ಅಧಿಕಾರಕ್ಕಾಗಿ ಬಣ್ಣ ಬದಲಿಸುವ ಗೋಸುಂಬೆ ವ್ಯಕ್ತಿತ್ವದವನಲ್ಲ. ನೆಲವನ್ನೇ ನಂಬಿ ಬದುಕುವ ಕಡು ಕಷ್ಟ ಜೀವಿ. ಇಂತಹ ರೈತ ಸಮುದಾಯಕ್ಕೆ ಕೇಂದ್ರ-ರಾಜ್ಯ ಸರ್ಕಾರಗಳು ರಟ್ಟೆಗೆ ಬಲ ತುಂಬುವ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕೇ ಹೊರತು, ಹೇಡಿ ಎಂಬ ಪಟ್ಟ ಕಟ್ಟಿ ಹೊಣೆಗೇಡಿತನ ಪ್ರದರ್ಶಿಸಬಾರದು’ ಎಂದು ವಾಗ್ದಾಳಿ ನಡೆಸಿದ್ದಾರೆ.

ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕು ತೋಚದಂತಾಗಿ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತ ಹೇಡಿಯಲ್ಲ’ ಎಂದು ಬಿ.ಸಿ.ಪಾಟೀಲ್ ವಿರುದ್ಧ ಕಿಡಿಕಾರಿದ್ದಾರೆ.

Edited By : Vijay Kumar
PublicNext

PublicNext

03/12/2020 05:52 pm

Cinque Terre

71.1 K

Cinque Terre

11