ಬೆಂಗಳೂರು: ಹೊಸ ವರ್ಷಚಾರಣೆ ಮತ್ತು ಕ್ರಿಸ್ಮಸ್ ನಮ್ಮ ಸಂಸ್ಕೃತಿಯಲ್ಲ. ಕೋವಿಡ್‌ನ ಸಂಕಷ್ಟ ಸ್ಥಿತಿಯಲ್ಲಿ ಸಂಭ್ರಮಾಚರಣೆ ಅಗತ್ಯವಾದರೂ ಏನಿದೆ? ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಭಾರತೀಯ ಕ್ಯಾಲೆಂಡರ್‌ನ ಹೊಸ ವರ್ಷ ಅಲ್ಲ. ಯುಗಾದಿ ನಮ್ಮ ಹೊಸ ವರ್ಷ. ಎಲ್ಲಕ್ಕಿಂತ ಮಿಗಿಲಾಗಿ ಕೊರೋನಾ ಸಂಕಷ್ಟದಲ್ಲಿ ಸಂಭ್ರಮಾಚರಣೆ ಅವಶ್ಯಕತೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೊಸವರ್ಷ ಮತ್ತು ಕ್ರಿಸ್ಮಸ್ ಸಂದರ್ಭದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ. ಕೆಲ ನಿರ್ಬಂಧಗಳ ಅವಶ್ಯಕತೆ ಇದೆ. ಆ ಬಗ್ಗೆ ಸಿಎಂ ಜತೆ ಚರ್ಚಿಸಿ ಪ್ರಕಟಿಸಲಾಗುವುದು. ಆದರೆ ಕರ್ಫ್ಯೂ ಜಾರಿ ಅಗತ್ಯ ಇದೆ ಎನಿಸುತ್ತಿಲ್ಲ. ಆದರೂ ತಜ್ಞರ ಜತೆ ಚರ್ಚಿಸಿದ ಬಳಿಕವಷ್ಟೇ ಈ ಕುರಿತು ನಿರ್ಧರಿಸಲಾಗುವುದು ಎಂದರು.
PublicNext
04/12/2020 12:55 pm