ಹೈದರಾಬಾದ್ : ಮುತ್ತಿನ ನಗರಿ ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್ಎಂಸಿ) ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.
ಬ್ಯಾಲೆಟ್ ಪೇಪರ್ ಮೂಲಕ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದೆ.
150 ವಾರ್ಡ್ ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಬಗ್ಗೆ ಹಲವಾರು ಬಿಜೆಪಿ ನಾಯಕರು ಟ್ವೀಟ್ ಮಾಡಿದ್ದಾರೆ.
ಜಿಎಚ್ಎಂಸಿ ಚುನಾವಣೆಯಲ್ಲಿ ತೆಲಂಗಾಣದ ಟಿಆರ್ಎಸ್ ಮತ್ತು ಬಿಜೆಪಿಯ ಪ್ರತಿಷ್ಠೆ ಅಡಗಿದೆ.
ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಚುನಾವಣೆ ಫಲಿತಾಂಶದ ಬಗ್ಗೆ ಟ್ವೀಟ್ ಮಾಡಿದ್ದಾರೆ.
"ಹೈದರಾಬಾದ್ ನಲ್ಲಿ ಬಿಜೆಪಿಯ ಮುನ್ನಡೆಯಿಂದಾಗಿ ಪಕ್ಷಕ್ಕೆ ದಕ್ಷಿಣ ಭಾರತದಲ್ಲಿ ಹೆಜ್ಜೆ ಗುರುತು ಸಿಕ್ಕಿದೆ" ಎಂದು ಹೇಳಿದ್ದಾರೆ.
ಬಿಜೆಪಿ ನಾಯಕಿ ಟ್ವೀಟ್
"ಹೈದರಾಬಾದ್ ನ ಗೆಲುವು ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಹೆಜ್ಜೆ ಗುರುತು ನೀಡಿದೆ.
ನಾನು ನಿಮಗೆ ಭರವಸೆ ಕೊಡುತ್ತೇನೆ. ತಮಿಳುನಾಡು ದೂರವಿಲ್ಲ.
2021ರ ಚುನಾವಣೆಯಲ್ಲಿ ತಮಿಳುನಾಡಿಗೆ ನಾವು ಅದ್ದೂರಿಯಾಗಿ ಪವೇಶ ಮಾಡಲಿದ್ದೇವೆ.
ನರೇಂದ್ರ ಮೋದಿ ಅವರ ಮೇಲೆ ನಂಬಿಕೆ ಇಡಿ" ಎಂದು ಖೂಷ್ಬೂ ಟ್ವೀಟ್ ಮಾಡಿದ್ದಾರೆ.
PublicNext
04/12/2020 02:46 pm