ಬೆಂಗಳೂರು : ಹೈದರಾಬಾದ್ ಮಹಾನಗರ ಪಾಲಿಕೆ ಫಲಿತಾಂಶದಲ್ಲಿ ಬಿಜೆಪಿ ಸಾಧನೆಯ ಬಗ್ಗೆ ಮಾತನಾಡಿದ ಸಂಸದ ಮತ್ತು ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಜನ ಕುಟುಂಬ ಆಧಾರಿತ ರಾಜಕಾರಣ, ಭ್ರಷ್ಟ ಆಡಳಿತ ಮತ್ತು ಹಿಂದೂ ವಿರೋಧಿ ರಾಜನೀತಿ ವಿರುದ್ಧ ವೋಟ್ ಮಾಡುತ್ತಾರೆ ಎಂದು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಜನ ಹಿಂದೂ ವಿರೋಧಿ ರಾಜನೀತಿ ವಿರುದ್ಧ ವೋಟ್ ಹಾಕುತ್ತಿದ್ದಾರೆ ಎಂದು ಸಂಸದ ಮತ್ತು ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಈ ಚುನಾವಣೆಯ ಫಲಿತಾಂಶ ನನಗೆ ಸಂತೋಷ ನೀಡಿದೆ. 4 ಸ್ಥಾನದಿಂದ 40 ಸ್ಥಾನ ದಾಟಿದ್ದೇವೆ.
ಹತ್ತು ಪಟ್ಟು ಫಲಿತಾಂಶ ಹೆಚ್ಚಾಗಿದೆ. ಈ ಸಾಧನೆ ಬಿಜೆಪಿ ಮೇಲೆ, ಮೋದಿಯವರ ಅಭಿವೃದ್ಧಿ ಕಾರ್ಯಗಳ ಮೇಲೆ ಜನ ನಂಬಿಕೆ ಇಟ್ಕೊಂಡಿರೋದನ್ನು ತೋರಿಸುತ್ತೆ.
ಈ ಹೈದರಾಬಾದ್ ಮಹಾನಗರ ಪಾಲಿಕೆಯ ಫಲಿತಾಂಶ ಮುಂಬರುವ ದಿನಗಳಲ್ಲಿ ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ ಎಂಬ ಸುಳಿವು ಕೊಟ್ಟಿದೆ ಎಂದು ತಿಳಿಸಿದರು.
PublicNext
04/12/2020 09:55 pm