ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೈದರಾಬಾದ್ ನಲ್ಲಿ ಬಿಜೆಪಿ ಅಬ್ಬರ : ಟ್ವೀಟ್ ಮೂಲಕ ಹರ್ಷ ವ್ಯಕ್ತಪಡಿಸಿದ ಅಮಿತ್ ಶಾ!

ಹೈದರಾಬಾದ್ : ತೀವ್ರ ಕುತೂಹಲ ಹುಟ್ಟುಹಾಕಿದ್ದ ಹೈದರಾಬಾದ್ ಮಹಾನಗರ ಪಾಲಿಕೆ(GHMC) ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದು ತಲುಪಿದ್ದು, 150 ವಾರ್ಡ್ ಗಳ ಪೈಕಿ ಕೇವಲ 4 ವಾರ್ಡ್ ಗಳ ಫಲಿತಾಂಶ ಘೋಷಣೆ ಬಾಕಿ ಇದೆ.

ಸದ್ಯದ ಅಂಕಿ ಅಂಶಗಳ ಪ್ರಕಾರ ಟಿಆರ್ ಎಸ್-56, ಬಿಜೆಪಿ-48, ಎಐಎಂಐಎಂ-44 ಹಾಗೂ ಕಾಂಗ್ರೆಸ್-02 ಸ್ಥಾನಗಳಲ್ಲಿ ಜಯ ದಾಖಲಿಸಿದೆ.

ಟಿಆರ್ ಎಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೆ, ಬಿಜೆಪಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಚುನಾವಣೆಯಲ್ಲಿ ಪಕ್ಷದ ಪ್ರದರ್ಶನಕ್ಕೆ ತೀವ್ರ ಸಂತಸ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಜ್ಯ ಘಟಕಕ್ಕೆ ಶುಭಾಶಯದ ಸಂದೇಶ ರವಾನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಶಾ, ಪ್ರಧಾನಿ ಮೋದಿ ಅವರ ಮೇಲೆ ತೆಲಂಗಾಣ ಜನತೆ ಭರವಸೆ ಇಟ್ಟಿದ್ದಕ್ಕೆ ಧನ್ಯವಾದ ಅರ್ಪಿಸುವುದಾಗಿ ಹೇಳಿದ್ದಾರೆ.

GHMC ಚುನಾವಣೆಯಲ್ಲಿ ಪಕ್ಷದ ಅದ್ಭುತ ಪ್ರದರ್ಶನಕ್ಕೆ ಕಾರಣೀಭೂತರಾದ ರಾಜ್ಯ ಘಟಕದ ಎಲ್ಲಾ ನಾಯಕರಿಗೂ ಹಾಗೂ ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸುವುದಾಗಿ ಅಮಿತ್ ಶಾ ಹೇಳಿದ್ದಾರೆ.

ಇನ್ನು ಟಿಆರ್ ಎಸ್ ಫಲಿತಾಂಶದಿಂದ ದಂಗಾಗಿದ್ದು, ಅತಿದೊಡ್ಡ ಪಕ್ಷವಾಗಿ ಆರಿಸಿದ ಹೈದರಾಬಾದ್ ಜನತೆಗೆ ಧನ್ಯವಾದ ಸಲ್ಲಿಸಿದೆ. ಆದರೆ ಫಲಿತಾಂಶ ನಾವು ನಿರೀಕ್ಷಿಸಿದಂತೆ ಇಲ್ಲ ಎಂದು ಟಿಆರ್ ಎಸ್ ನಾಯಕರು ಸತ್ಯ ಒಪ್ಪಿಕೊಂಡಿದ್ದಾರೆ.

ಇನ್ನೇನು ಕೆಲವೇ ಕ್ಷಣಗಳಲ್ಲಿ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.

Edited By : Nirmala Aralikatti
PublicNext

PublicNext

04/12/2020 10:26 pm

Cinque Terre

94.61 K

Cinque Terre

16