ಬೆಂಗಳೂರು: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿಕೊಡುವ ಸಾಧ್ಯತೆ ಕಂಡು ಬರುತ್ತಿದೆ.
ಹೌದು. ಕೇಂದ್ರ ಮಾಜಿ ಸಚಿವ ಸುರೇಶ್ ಅಂಗಡಿ ಸಾವಿನಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಜಗದೀಶ್ ಶಟ್ಟರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಗಂಭೀರ ಚಿಂತನೆ ನಡೆದುತ್ತಿದೆ. ಈ ಮೂಲಕ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದರೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ ಪ್ರಸ್ತಾಪವೂ ಇದೆ ಎಂಬ ಮಾಹಿತಿ ಲಭಿಸಿದೆ.
ಈ ಬಗ್ಗೆ ಬಿಜೆಪಿ ವರಿಷ್ಠರು ಕೂಡ ಜಗದೀಶ್ ಶೆಟ್ಟರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಜಗದೀಶ್ ಶೆಟ್ಟರ್ ಅವರು ರಾಷ್ಟ್ರ ರಾಜಕಾರಣಕ್ಕೆ ಕಾಲಿಟ್ಟರೆ ರಾಜ್ಯ ಸರ್ಕಾರದಲ್ಲಿ ಮತ್ತೊಬ್ಬರಿ ಸಚಿವ ಸ್ಥಾನ ಸಿಗುತ್ತದೆ ಎಂಬ ಲೆಕ್ಕಾಚಾರ ಬಿಜೆಪಿಯಲ್ಲಿ ಇದೆ ಎನ್ನಲಾಗಿದೆ.
PublicNext
05/12/2020 02:34 pm