ನವದೆಹಲಿ: ಹೊಸ ಕೃಷಿ ಕಾನೂನು ವಿರೋಧಿಸಿ ದೇಶದಲ್ಲಿ ಭಾರೀ ಪ್ರತಿಭಟನೆ ಶುರುವಾಗಿದ್ದು, ಇದಕ್ಕೆ ಕಾಂಗ್ರೆಸ್ ಬೆಂಬಲ ಸೂಚಿಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಆದರೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮಾಹಿತಿ ಕಂಡು 'ಕೈ' ಮುಖಂಡರು ಕಂಗಾಲಾಗಿದ್ದಾರೆ.
2019ರ ಲೋಕಸಭಾ ಚುನಾವಣೆಯ ವೇಳೆ ಕಾಂಗ್ರೆಸ್ನ ಪ್ರಣಾಳಿಕೆಯಲ್ಲಿಯೂ ಇದೇ ಕೃಷಿ ಕಾನೂನು ಜಾರಿ ಮಾಡುವ ಕುರಿತು ಉಲ್ಲೇಖವಾಗಿರುವುದು ಇದೀಗ ಬಹಿರಂಗಗೊಂಡಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಇಡೀ ಎಪಿಎಂಸಿ ಕಾನೂನನ್ನೇ ರದ್ದು ಮಾಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಪೂರ್ಣವಾಗಿ ಕೃಷಿ ಕಾಯ್ದೆಯನ್ನು ರದ್ದು ಮಾಡಿಲ್ಲ.
ಕಾಂಗ್ರೆಸ್ನ ಪ್ರಣಾಳಿಕೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇದನ್ನು ಕಂಡ ಕಾಂಗ್ರೆಸ್ ಮುಖಂಡರು ಕೊಂಚ ತಬ್ಬಿಬ್ಬಾಗಿದ್ದಾರೆ.
PublicNext
05/12/2020 04:56 pm