ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದ 27 ಗ್ರಾಮ ಪಂಚಾಯತಿಗಳಿಗೆ ಇಲ್ಲ ಚುನಾವಣೆ

ಬೆಂಗಳೂರು: ಈಗಾಗಲೇ ಘೋಷಣೆಯಾಗಿರುವ ರಾಜ್ಯದ 5,762 ಗ್ರಾಮ ಪಂಚಾಯತಿಗಳ ಪೈಕಿ 27 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸದಿರಲು ಚುನಾವಣಾ ಆಯೋಗ ನಿರ್ಧರಿಸಿದೆ.

ಕೆಲ ಗ್ರಾಮ ಪಂಚಾಯತಿಗಳು ನಗರ ಸ್ಥಳೀಯ ಸಂಸ್ಥೆಗಳಾಗಿ ಪರಿವರ್ತಿತವಾಗಿರುವ ಹಿನ್ನೆಲೆ 26 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸದಿರಲು ರಾಜ್ಯ ಚುನಾವಣಾ ಆಯೋಗ ತೀರ್ಮಾನಿಸಿದೆ. ಅಷ್ಟೇ ಅಲ್ಲದೆ ಉಡುಪಿ ಜಿಲ್ಲೆ ಕುಂದಾಪುರದ ಗ್ರಾಮವೊಂದರ ವಿವಾದದ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆ ಗ್ರಾಮ ಪಂಚಾಯತಿಗೆ ಸಹ ಚುನಾವಣೆ ಇರುವುದಿಲ್ಲ. ಹೀಗಾಗಿ 5,735 ಗ್ರಾಮ ಪಂಚಾಯತಿಗಳಿಗೆ ಮಾತ್ರ ಚುನಾವಣೆ ನಡೆಯಲಿದೆ.

ಯಾವ ಗ್ರಾಮ ಪಂಚಾಯತಿಗಳಿಗೆ ಇಲ್ಲ ಚುಮಾವಣೆ:

ಬೆಂಗಳೂರು ಉತ್ತರ ತಾಲೂಕಿನ ಸೋಮಶೆಟ್ಟಿಹಳ್ಳಿ, ಚಿಕ್ಕಬಾಣವಾರ, ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ, ಯಲಹಂಕ ತಾಲೂಕಿನ ಹುಣಸಮಾರನಹಳ್ಳಿ, ಸೊಣ್ಣಪ್ಪನಹಳ್ಳಿ, ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ, ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲೂಕಿನ ಯರಗಟ್ಟಿ, ಅಥಣಿ ತಾಲೂಕಿನ ಕಾಗವಾಡ, ಬೆಳಗಾವಿ ತಾಲೂಕಿನ ಮಚ್ಚೆ ಮತ್ತು ಪೀರನವಾಡಿ ಗ್ರಾಮ ಪಂಚಾಯತಿ ಚುನಾವಣೆ ಕೈಬಿಡಲಾಗಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ, ಚಿಂಚೋಡಿ, ಕರಡಿಗುಡ್ಡ, ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹೆಚ್.ಕಡದಕಟ್ಟೆ, ಹರಿಹರ ತಾಲೂಕಿನ ಗುತ್ತೂರು, ಕೋಲಾರ ತಾಲೂಕಿನ ವೇಮಗಲ್, ಕುರುಗಲ್, ಶೆಟ್ಟಿಹಳ್ಳಿ, ಚೌಡದೇವನಹಳ್ಳಿ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಿನ್ನಿಗೋಳಿ, ಮನ್ನಬೆಟ್ಟು, ಕಟೀಲು (ಕೊಂಡೆ ಮೂಲ), ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೊಸಾಡು ಹಾಗೂ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ (ಗುಳದಕೇರಿ), ಮಂಕಿ-ಎ (ಹಳೆಮರ), ಮಂಕಿ-ಬಿ(ಅನಂತವಾಡಿ), ಮಂಕಿ-ಸಿ(ಚಿತ್ತಾರ).

ಈ ಎಲ್ಲ ಬೆಳವಣಿಗೆ ನಡುವೆ ಡಿಸೆಂಬರ್ 27ರಿಂದ 29ರವರೆಗೆ ದತ್ತ ಜಯಂತಿ ಆಚರಣೆ ಇರುವುದರಿಂದ ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ 209 ಗ್ರಾಮ ಪಂಚಾಯತಿಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಲಾಗಿದೆ. ಡಿಸೆಂಬರ್ 22ರಂದು ಇಲ್ಲಿ ಚುನಾವಣೆ ನಡೆಯಲಿದೆ.

Edited By : Vijay Kumar
PublicNext

PublicNext

06/12/2020 11:28 am

Cinque Terre

58.75 K

Cinque Terre

0

ಸಂಬಂಧಿತ ಸುದ್ದಿ