ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿ.8ರಂದು ಮತ್ತೆ ರಾಜ್ಯದಲ್ಲಿ ಬಂದ್‌

ಬೆಂಗಳೂರು: ಮರಾಠಿ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕರ್ನಾಟಕ ಬಂದ್‌ ನಡೆದ ಮೂರು ದಿನ ಬಳಿಕ ಮತ್ತೆ ರಾಜ್ಯದಲ್ಲಿ ಬಂದ್‌ ನಡೆಯಲಿದೆ.

ದೆಹಲಿಯ ರೈತರ ಚಳುವಳಿಯನ್ನು ಕೇಂದ್ರ ಸರ್ಕಾರ ಹತ್ತಿಕ್ಕುವ ಕ್ರಮವನ್ನು ಕೆಲಸ ಮಾಡುತ್ತಿದೆ. ಹೀಗಾಗಿ ಭಾರತ್ ಬಂದ್ ಹಿನ್ನೆಲೆಯಲ್ಲಿ ಡಿಸೆಂಬರ್ 8 ರಂದು ಕರ್ನಾಟಕ ಬಂದ್ ನಡೆಸಲಾಗುತ್ತಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದಾರೆ.

ಸುದ್ದಿಗೋಷ್ಠಿಯ ನಡೆಸಿ ಮಾತನಾಡಿದ ಅವರು, 'ಕೇಂದ್ರ ಸರ್ಕಾರವು ರೈತರ ದಾರಿ ತಪ್ಪಿಸುವ ಕೆಲಸ ಮಾಡಿದ್ದರಿಂದ ಇದೇ 8 ರಂದು ಭಾರತ ಬಂದ್‌ಗೆ ಕರೆ ನೀಡಲಾಗಿದೆ. ಇದಕ್ಕೆ ಕರ್ನಾಟಕದಲ್ಲೂ ಬೆಂಬಲ ನೀಡಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕುಗಳಲ್ಲಿ ರೈತರು ಪ್ರತಿಭಟನೆಯಲ್ಲಿ ಭಾಗವಹಿಸುತ್ತಾರೆ. ಅಂದು ಎಲ್ಲಾ ಹೆದ್ದಾರಿ, ರಸ್ತೆಗಳನ್ನು ಬಂದ್ ಮಾಡುತ್ತೇವೆ. ಬಂದ್‌ಗೆ ಎಡಪಕ್ಷದವರು, ಪುಟ್ಟಣ್ಣಯ್ಯನವರ ರೈತ ಸಂಘಟನೆ, ಕುರುಬೂರು ಶಾಂತಕುಮಾರ್ ಸಂಘಟನೆಯವರು ಭಾಗವಹಿಸುತ್ತಾರೆ. ಅನೇಕ ಕನ್ನಡ ಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಭಾಗವಹಿಸಲಿವೆ ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

06/12/2020 02:10 pm

Cinque Terre

73.1 K

Cinque Terre

15

ಸಂಬಂಧಿತ ಸುದ್ದಿ