ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾರು ಒಳಗೆ? ಯಾರು ಹೊರಗೆ? ಏನಾಗುತ್ತೆ ಸಂಪುಟ ರಾಜಕೀಯ

ಬೆಂಗಳೂರು: ಸಂಪುಟ ವಿಸ್ತರಣೆ ಕಗ್ಗಂಟು ಬಗೆಹರಿಯಲು ಸಂಕ್ರಾಂತಿಯವರೆಗೆ ಕಾದು ನೋಡುವ ಲಕ್ಷಣಗಳು ರಾಜ್ಯ ರಾಜಕೀಯದಲ್ಲಿ ಕಾಣಿಸುತ್ತಿವೆ. ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಮಾಡುವ ಯಾವ ಲಕ್ಷಣಗಳಂತೂ ಕಾಣಿಸಲಿಲ್ಲ. ಇದು ಅತೃಪ್ತರ ಅತೃಪ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ.

ಅಧಿವೇಶನ ಮುಗಿದ ಬೆನ್ನಲ್ಲೇ ಗ್ರಾಮ ಪಂಚಾಯತ್‌ ಚುನಾವಣೆ ಅಬ್ಬರ ಶುರುವಾಗುವುದು. ಅದರ ಬೆನ್ನಲ್ಲೇ ಹೊಸ ವರ್ಷದ ಸಂಕ್ರಾಂತಿವರೆಗೆ ಧನುರ್ಮಾಸ ಇರಲಿದೆ. ಹೀಗಾಗಿ, ಆ ಚುನಾವಣೆ, ಧನುರ್ಮಾಸ ಎಲ್ಲ ಮುಗಿಸಿ ಸಂಕ್ರಾಂತಿ ಬಳಿಕ ಸಂಪುಟ ಕಸರತ್ತಿಗೆ ಮುಕ್ತಿ ಮುಕ್ತಿ ಸಿಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದ ಯಡಿಯೂರಪ್ಪ ಅವರು ತಾವು ನೀಡಿದ ವಾಗ್ದಾನದಂತೆ ಸರ್ಕಾರ ರಚಿಸಲು ಕಾರಣರಾದ ಅನ್ಯ ಪಕ್ಷಗಳಿಂದ ವಲಸೆ ಬಂದವರಿಗೆ ವಿಳಂಬ ಮಾಡದೆ ಸಚಿವ ಸ್ಥಾನ ನೀಡುವ ಅನಿವಾರ್ಯತೆಯನ್ನು ವಿವರಿಸಿದ್ದರು. ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರೊಂದಿಗೆ ಚರ್ಚಿಸಿ ತಿಳಿಸುವುದಾಗಿ ನಡ್ಡಾ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದ ಯಡಿಯೂರಪ್ಪ ಅವರು ತಾವು ನೀಡಿದ ವಾಗ್ದಾನದಂತೆ ಸರ್ಕಾರ ರಚಿಸಲು ಕಾರಣರಾದ ಅನ್ಯ ಪಕ್ಷಗಳಿಂದ ವಲಸೆ ಬಂದವರಿಗೆ ವಿಳಂಬ ಮಾಡದೆ ಸಚಿವ ಸ್ಥಾನ ನೀಡುವ ಅನಿವಾರ್ಯತೆಯನ್ನು ವಿವರಿಸಿದ್ದರು. ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರೊಂದಿಗೆ ಚರ್ಚಿಸಿ ತಿಳಿಸುವುದಾಗಿ ನಡ್ಡಾ ಅವರೂ ಭರವಸೆ ನೀಡಿದ್ದಾರೆ.

Edited By : Nagaraj Tulugeri
PublicNext

PublicNext

06/12/2020 09:34 pm

Cinque Terre

117.45 K

Cinque Terre

1