ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಡಿಸೆಂಬರ್ 15ರವರೆಗೆ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಸಿಎಂ ಯಡಿಯೂರಪ್ಪ ಅವರ ಸರ್ಕಾರವು ವಿವಾದಿತ ಮಸೂದೆ ಮಂಡನೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಉಭಯ ಸದನಗಳ ಕಲಾಪಗಳಲ್ಲೂ ಆಡಳಿತ ಪಕ್ಷ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ಮಧ್ಯೆ ಪರಸ್ಪರ ವಾಕ್ಸಮರ ನಡೆಯಲಿದೆ.
ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳ ವಿರುದ್ಧ ರೈತರು ಮಂಗಳವಾರ ಭಾರತ್ ಬಂದ್'ಗೆ ನೀಡಿದೆ. ಈ ಹಂತದಲ್ಲೇ ರಾಜ್ಯ ಸರ್ಕಾರವು ಎಪಿಎಂಸಿ ತಿದ್ದುಪಡಿ ವಿಧೇಯಕ, ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ವಿಧೇಯಕಗಳನ್ನು ವಿಧಾನಪರಿಷತ್'ನಲ್ಲಿ ಮರುಮಂಡನೆ ಮಾಡಿ ಅಂಗೀಕಾರ ಪಡೆಯಲು ಮುಂದಾಗಿದೆ. ಜೊತೆಗೆ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಹಾಗೂ ಗೋಹತ್ಯ ನಿಷೇಧ ಸೇರಿದಂತೆ ಮಹತ್ವದ ಮಸೂದೆಗಳನ್ನು ಮಂಡಿಸಲು ಸಜ್ಜಾಗಿದ್ದು, ಇಂದು ನಡೆಯುವ ಅಧಿವೇಶನ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.
ಇತ್ತ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿ ಬೀಳಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ. ನೆರೆ ಪರಿಹಾರದಲ್ಲಿನ ವೈಫಲ್ಯ, ಕೇಂದ್ರದಿಂದ ಪರಿಹಾರ ಬಿಡುಗಡೆಯಲ್ಲಿನ ತಾರತಮ್ಯ, ರೈತರ ಸಮಸ್ಯೆಗಳು, ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರದ ವೈಫಲ್ಯ, ಸಚಿವ ಸಂಪುಟ ವಿಸ್ತರಣೆಯ ಗೊಂದಲಗಳಿಂದ ಆಡಳಿತದ ಮೇಲೆ ಆಗಿರುವ ಪರಿಣಾಮಗಳು, ನಾಯಕತ್ವ ಬದಲಾವಣೆಯ ಚರ್ಚೆ, ಬಿಜೆಪಿಯಲ್ಲಿ ನಡೆದಿರುವ ರಾಜಕೀಯ ವಿದ್ಯಮಾನಗಳು. ಈ ಎಲ್ಲವನ್ನು ಸದನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸೋದು ಕಾಂಗ್ರೆಸ್ ಪ್ಲಾನ್ ಆಗಿದೆ.
PublicNext
07/12/2020 08:32 am