ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸ ಸಂಸತ್ ಭವನ ಶಿಲಾನ್ಯಾಸಕ್ಕೆ ಸುಪ್ರೀಂ ಅಸ್ತು

ನವದೆಹಲಿ: ಸಂಸದರು, ಸಚಿವರ ದಶಕಗಳ ಬೇಡಿಕೆಯೊಂದು ಈಡೇರುತ್ತಿದೆ. ರಾಜಪಥ ರಸ್ತೆಯಲ್ಲಿರುವ ಭವ್ಯ ಸಂಸತ್ ಭವನದ ಸನಿಹದಲ್ಲೇ ಹೊಚ್ಚ ಹೊಸ ಸಂಸತ್ ಭವನದ ನಿರ್ಮಾಣವಾಗುತ್ತಿದೆ. ಕೇಂದ್ರ ಸರ್ಕಾರದ ಈ ಮಹತ್ವಾಕಾಂಕ್ಷಿ ‘ಸೆಂಟ್ರಲ್‌ ವಿಸ್ಟಾ’ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲು ಸುಪ್ರೀಂ ಕೋರ್ಟ್‌ ಸೋಮವಾರ ಅನುಮತಿ ನೀಡಿದೆ.

ಹೊಸ ಸಂಸತ್ ಭವನ ನಿರ್ಮಾಣದ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಅರ್ಜಿಗಳು ಇತ್ಯರ್ಥಗೊಳ್ಳುವವರೆಗೂ ಆ ಜಾಗದಲ್ಲಿ ಯಾವುದೇ ನಿರ್ಮಾಣ ಅಥವಾ ಕಟ್ಟಡ ತೆರವುಗೊಳಿಸುವ ಕಾರ್ಯಗಳನ್ನು ನಡೆಸುವುದಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ಶಂಕುಸ್ಥಾಪನೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

Edited By : Vijay Kumar
PublicNext

PublicNext

07/12/2020 01:43 pm

Cinque Terre

32.22 K

Cinque Terre

2

ಸಂಬಂಧಿತ ಸುದ್ದಿ