ಕೋಲ್ಕತ್ತಾ: ಕೇಂದ್ರ ಸರ್ಕಾರ ತಕ್ಷಣವೇ ರೈತ ವಿರೋಧಿ ಕೃಷಿ ಕಾನೂನನ್ನು ಹಿಂಪಡೆಯಬೇಕು ಇಲ್ಲವೇ ರಾಜೀನಾಮೆ ನೀಡಿ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.
ಪಶ್ಚಿಮ ಮಿಡ್ನಾಪುರ್ ಜಿಲ್ಲೆಯಲ್ಲಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನನ್ನು ಜೈಲಿಗೆ ಹಾಕಿದರೂ ಪರವಾಗಿಲ್ಲ. ಆದರೆ ಬಿಜೆಪಿಯ ದುರಾಡಳಿತವನ್ನು ಮಾತ್ರ ಸಹಿಸಿಕೊಳ್ಳುವುದಿಲ್ಲ. ರೈತರ ಹಕ್ಕುಗಳನ್ನು ಕಿತ್ತುಕೊಂಡ ನೀವು ಅಧಿಕಾರದಲ್ಲಿ ಉಳಿಯುವುದು ಯೋಗ್ಯವಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
PublicNext
07/12/2020 03:59 pm