ಬೆಂಗಳೂರು:ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಮತ್ತೊಮ್ಮೆ ಟ್ವೀಟ್ ಮೂಲಕ ಕಾಂಗ್ರೆಸ್ ಮೇಲೆ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಸಾಲು ಸಾಲು ಟ್ವೀಟ್ ಮಾಡಿರೋ ಕುಮಾರಸ್ವಾಮಿ ಅವರು ಮತ್ತೆ ಬಿಜೆಪಿ ಗೆಳೆತನ ಬಯಸ್ತಿದ್ದಾರಾ ಪ್ರಶ್ನೆಯೊಂದು ರಾಜ್ಯ ರಾಜಕೀಯ ಅಂಗಳದಲ್ಲಿ ಉದ್ಭವಿಸಿದೆ.
ಪರಿಷತ್ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ಜೆಡಿಎಸ್ ನ ಜಾತ್ಯತೀತತೆ ಬಹಿರಂಗವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಸಿದ್ದರಾಮಯ್ಯರ ದೃಷ್ಟಿಯಲ್ಲಿ ಜಾತ್ಯತೀತತೆ ಅಂದರೆ ಏನು? ಇದನ್ನು ತಿಳಿಯ ಬಯಸುತ್ತೇನೆ. ಕಾಂಗ್ರೆಸ್ಸಿನ ಅಪವ್ಯಾಖ್ಯಾನದಿಂದಲೇ ಇಂದು ಜಾತ್ಯತೀತೆಯನ್ನು ಅನುಮಾನಿಸಲಾಗುತ್ತಿದೆ ಸಭಾಪತಿ ಅವಿಶ್ವಾಸ ನಿರ್ಣಯದ ವೇಳೆ ಬೆಂಬಲ ನೀಡುವಂತೆ ಕಾಂಗ್ರೆಸ್ನ ಯಾವ ನಾಯಕನೂ ಸೌಜನ್ಯಕ್ಕೂ ಜೆಡಿಎಸ್ ಬಳಿ ಚರ್ಚಿಸಿಲ್ಲ. ಹೀಗಿದ್ದೂ, ಜೆಡಿಎಸ್ ನ ಜಾತ್ಯತೀತತೆಯ ಪರೀಕ್ಷೆ ನಡೆಯುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆ ದುರಹಂಕಾರದ್ದು. ಬೆಂಬಲ ಕೇಳದಿದ್ದರೂ ಬೆಂಬಲಿಸಲು ನಾವೇನು ಗುಲಾಮರಲ್ಲ. ಕಾಂಗ್ರೆಸ್ಸಿನ ದೌಲತ್ತೇ ಅದರ ದುಸ್ಥಿತಿಗೆ ಕಾರಣ.
“ನಮ್ಮ ಧರ್ಮ, ದೇವರಲ್ಲಿ ಆಳ ನಂಬಿಕೆ ಹೊಂದಿಯೂ, ಎಲ್ಲರ ನಂಬಿಕೆಗಳನ್ನು ಗೌರವಿಸುವುದು, ಎಲ್ಲರನ್ನೂ ಸಮಾನವಾಗಿ ಕಾಣುವುದು” ದೇವೇಗೌಡರ ಜಾತ್ಯತೀತೆ ಎಂಬುದನ್ನು ಸಂದರ್ಭ ಸಿಕ್ಕಾಗ ಹೇಳಿದ್ದೇನೆ. ಆದರೆ ಕಾಂಗ್ರೆಸ್, ಸಿದ್ದರಾಮಯ್ಯರ ವ್ಯಾಖ್ಯಾನ ಇದಕ್ಕೆ ವಿರುದ್ಧವಾದ್ದು. ಜಾತಿಗಳನ್ನು ಒಡೆಯುವುದು, ಅನಗತ್ಯ ಓಲೈಕೆಯೇ ಅವರ ಜಾತ್ಯತೀತತೆ.
ಒಳ್ಳೆ ಇಮೇಜ್ ಅನ್ನು ಚುನಾವಣೆ ಮತ್ತು ಸ್ಥಾನಗಳಿಕೆ ಮೇಲೆ ಲೆಕ್ಕ ಹಾಕಿದ್ದಾರೆ ಸಿದ್ದರಾಮಯ್ಯನವರು. ಹಾಗಾದರೆ ದೇಶದ ಎಲ್ಲ ಕಡೆ ಸೋಲುತ್ತಿರುವ ಕಾಂಗ್ರೆಸ್ ಇಮೇಜ್ ಕತೆ ಏನು? 2018ರ ಚುನಾವಣೆಯಲ್ಲಿ 120 ರಿಂದ 80ಕ್ಕೆ ಕುಸಿದ, ಸ್ವತಃ ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯನವರಿಗೆ ಇಮೇಜ್ ಇತ್ತೇ? ಇಮೇಜ್ ಇರುವುದು ನಮ್ಮ ಒಳ್ಳೆತನದಲ್ಲಿ ಎಂದು ಟಾಂಗ್ ಕೊಟ್ಟಿದ್ದಾರೆ.
PublicNext
07/12/2020 04:12 pm