ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ಸ್ಪೀಕರ್ ರಾಜಕೀಯದಿಂದ ದೂರ.. ದೂರ..ದೂರ

ಕೋಲಾರ : ರಾಜಕೀಯದಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡ ರಾಜಕೀಯ ಮಾಜಿ ಸ್ಪೀಕರ್ ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್ ಕುಮಾರ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

‘ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ’ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ಇಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದೆ.

ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದರು. ‘ರಾಜಕೀಯ ಜೀವನದಲ್ಲಿ ಇಷ್ಟು ವರ್ಷ ನ್ಯಾಯಯುತವಾಗಿ ಬದುಕಿದ್ದೇನೆ.

ಹಣ ತೆಗೆದುಕೊಂಡು ರಾಜಕೀಯ ಮಾಡಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಬಿಜೆಪಿಗೆ ಹೋದರು.

ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದರು. ಅಧಿಕಾರದಾಸೆಗೆ ಅನೈತಿಕ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಮಾರ್ಮಿಕವಾಗಿ ನುಡಿದ ಅವರು ಗೌರವಯುತವಾಗಿ ಸಕ್ರೀಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂಬುದಾಗಿ ರಾಜಕೀಯ ನಿವೃತ್ತಿ ಘೋಷಿಸಿದರು.

Edited By : Nirmala Aralikatti
PublicNext

PublicNext

07/12/2020 08:33 pm

Cinque Terre

138.92 K

Cinque Terre

21

ಸಂಬಂಧಿತ ಸುದ್ದಿ