ಬೆಂಗಳೂರು: ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಕಾಯ್ದೆ ವಿರೋಧಿಸಿ ಭಾರತ್ ಬಂದ್ಗೆ ಕರೆ ನೀಡಲಾಗಿದೆ. ಇಡೀ ದೇಶಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಜೊತೆಗೆ ಕರ್ನಾಟಕದಲ್ಲೂ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ. ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಖಚಿತವಾಗಿ ಮುಂದುವರಿಯಲಿದೆ. ಜೊತೆಗೆ ರೈತರಿಗೆ ಹೆಚ್ಚಿನ ಅವಕಾಶ, ಆಯ್ಕೆ ಮತ್ತು ಆದಾಯ ಹೆಚ್ಚಿಸಲು ನೂತನ ಕಾಯ್ದೆ ನೆರವಾಗಲಿದೆ ಎಂದು ಬರೆದುಕೊಂಡಿದ್ದಾರೆ.
PublicNext
08/12/2020 11:50 am