ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಜ್ರಿವಾಲ್ ಗೆ ಗೃಹ ಬಂಧನ : AAP ಆರೋಪ

ನವದೆಹಲಿ: ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿದ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕೇಂದ್ರ ಸರ್ಕಾರ ಗೃಹ ಬಂಧನದಲ್ಲಿರಿಸಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಕೇಂದ್ರ ಸರ್ಕಾರದ ಕೃಷಿ ಕಾನೂನನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಿನ್ನಲೆಯಲ್ಲಿ ದೆಹಲಿಯ ಸಿಂಗು ಗಡಿಯಲ್ಲಿ ಸಿಎಂ ಕೇಜ್ರಿವಾಲ್ ರೈತರನ್ನು ಭೇಟಿ ಮಾಡಿದ್ದ ಬೆನ್ನಲ್ಲೇ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಆಪ್, 'ನಿನ್ನೆ ಸಿಂಗು ಗಡಿಯಲ್ಲಿ ರೈತರನ್ನು ಭೇಟಿ ಮಾಡಿದಾಗಿನಿಂದಲೂ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಿಜೆಪಿಯ ದೆಹಲಿ ಪೊಲೀಸರು ಗೃಹಬಂಧನದಲ್ಲಿರಿಸಿದ್ದಾರೆ.

ಅವರ ನಿವಾಸದೊಳಗೆ ಪ್ರವೇಶಿಸಲು ಯಾರಿಗೂ ಅನುಮತಿ ನೀಡುತ್ತಿಲ್ಲ ಎಂದು ಟ್ವೀಟ್ ಮಾಡಿದೆ.

ಪ್ರತಿಭಟನಾಕಾರರನ್ನು ಭೇಟಿ ಮಾಡಿದ ಕ್ರೇಜಿವಾಲ 'ನಾವು 'ಸೆವಾದಾರರಂತೆ ಕೆಲಸ ಮಾಡುತ್ತಿದ್ದೇವೆ. ಇಲ್ಲಿ ನಾನು ಮುಖ್ಯಮಂತ್ರಿಯಾಗಿ ಬಂದಿಲ್ಲ, ಆದರೆ ರೈತರಿಗೆ ಸೇವೆ ಸಲ್ಲಿಸಲು 'ಸೇವಾದಾರ್' ಆಗಿ ಬಂದಿದ್ದೇನೆ.

ರೈತರನ್ನು ಬೆಂಬಲಿಸುವುದು ನಮ್ಮ ಜವಾಬ್ದಾರಿಯಾಗಿದೆ" ಎಂದು ತಿಳಿಸಿದ್ದರು.

Edited By : Nirmala Aralikatti
PublicNext

PublicNext

08/12/2020 12:02 pm

Cinque Terre

78.07 K

Cinque Terre

4