ಬೆಂಗಳೂರು: ನಿನ್ನೆ ಸೋಮವಾರವಷ್ಟೇ ಚಳಿಗಾಲದ ವಿಧಾನಮಂಡಲ ಅಧಿವೇಶ ಆರಂಭಗೊಂಡಿತ್ತು. ಆದ್ರೆ ಅಧಿವೇಶನವನ್ನು ನಾಲ್ಕೇ ದಿನಕ್ಕೆ ಮುಗಿಸಲು ನಿರ್ಧರಿಸಲಾಗಿದೆ. ಡಿಸೆಂಬರ್ 15ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನವನ್ನು ಕೇವಲ ನಾಲ್ಕು ದಿನಕ್ಕೆ ಸೀಮಿತಗೊಳಿಸಿ ಇದೇ ಗುರುವಾರ ಮುಕ್ತಾಯಗೊಳಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಹೀಗಾಗಿ ಅಧಿವೇಶನದಲ್ಲಿ ನಡೆಯಬೇಕಿದ್ದ ಅನೇಕ ಚರ್ಚೆಗಳಿಗೆ ಕತ್ತರಿ ಬೀಳುವುದು ಬಹುತೇಕ ಖಚಿತವಾಗಿದೆ.
ಗ್ರಾಮ ಪಂಚಾಯತಿ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಅಧಿವೇಶನವನ್ನು ಗುರುವಾರಕ್ಕೆ ಮುಕ್ತಾಯಗೊಳಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆ ಒನ್ ನೇಷನ್ ಒನ್ ಎಲೆಕ್ಷನ್ ಚರ್ಚೆ ಸೇರಿದಂತೆ ಅನೇಕ ವಿಚಾರಗಳ ಚರ್ಚೆ ಕೂಡಾ ಮುಂದೂಡಿಕೆ ಮಾಡಲಾಗಿದೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ನಡೆದ ಸದನ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ.
PublicNext
08/12/2020 03:33 pm