ಗಾಂಧಿನಗರ: ಕೊತ್ತಂಬರಿ ಹಾಗೂ ಮೆಂತ್ಯೆ ನಡುವಿನ ವ್ಯತ್ಯಾಸ ಗುರುತಿಸಿ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸವಾಲು ಹಾಕಿದ್ದಾರೆ.
ಗುಜರಾತ್ನ ಮೆಹ್ಸಾನಾದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊಸ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಭಾರತ್ ಬಂದ್‌ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲ ನೀಡಿದ್ದಾರೆ. ಆದರೆ ಅವರ ಜ್ಞಾನದ ಬಗ್ಗೆ ಕುತೂಹಲವಿದೆ. ಹೀಗಾಗಿ ಕೊತ್ತಂಬರಿ ಮತ್ತು ಮೆಂತ್ಯೆ ಬೆಳೆಯ ನಡುವಿನ ವ್ಯತ್ಯಾಸ ಗುರುತಿಸಲಿ ಎಂದು ವಾಗ್ದಾಳಿ ನಡೆಸಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಕೃಷಿ ಕಾಯ್ದೆ ತಿದ್ದುಪಡಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿತ್ತು. ಆದರೆ ಅವರಿಗೆ ಅಧಿಕಾರವೇ ಸಿಗಲಿಲ್ಲ. ಈಗ ನರೇಂದ್ರ ಮೋದಿ ಸರ್ಕಾರ ಅದನ್ನು ಜಾರಿಗೊಳಿಸಲು ಹೊರಟರೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ದೂರಿದರು.
PublicNext
08/12/2020 04:07 pm