ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

"ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ - ಚೆನ್ನಯ ಹೆಸರಿಡಲು ಪರಿಶೀಲಿಸಿ ಕೇಂದ್ರಕ್ಕೆ ಶಿಫಾರಸ್ಸು "

ಮೂಡುಬಿದಿರೆ: ತುಳುನಾಡಿನ ವೀರಪುರುಷರಾದ ಕೋಟಿ- ಚೆನ್ನಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಇಡಬೇಕೆಂದು ಮೂಲ್ಕಿ -ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅಧಿವೇಶನದಲ್ಲಿ ಮಂಗಳವಾರ ಪ್ರಸ್ತಾಪಿಸಿದರು.

`ವೀರಪುರುಷ ಕೋಟಿ- ಚೆನ್ನಯ ವಿಮಾನ ನಿಲ್ದಾಣ ಮಂಗಳೂರು' ಎಂದು ನಾಮಕರಣ ಮಾಡಬೇಕು. ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕೆಂದು ರ್ಯಾಲಿ, ಸಂವಿಧಾನಿಕವಾದ ಹೋರಾಟವನ್ನು ಜಿಲ್ಲೆಯಲ್ಲಿ ಮಾಡಲಾಗುತ್ತಿದೆ ಎಂದು ಅಧಿವೇಶನದಲ್ಲಿ ಅವರು ತಿಳಿಸಿದರು.

ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ಪರಿಶೀಲನೆ ಮಾಡಿ ಮುಂದುವರಿಯುತ್ತೇವೆ ಎಂದು ರಾಜ್ಯ ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು.

Edited By : Nagesh Gaonkar
PublicNext

PublicNext

08/12/2020 06:40 pm

Cinque Terre

112.94 K

Cinque Terre

2

ಸಂಬಂಧಿತ ಸುದ್ದಿ