ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ'- ಶೆಟ್ಟರ್‌ಗೆ ಬಿಜೆಪಿ ಹೈಕಮಾಂಡ್ ಸೂಚನೆ

ಬೆಂಗಳೂರು: ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ರಾಜ್ಯ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ವರಿಷ್ಠರು ಸೂಚಿನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಗೆಲುವು ಸಾಧಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.

ಸುರೇಶ್ ಅಂಗಡಿ ಅವರ ನಿಧನದಿಂದ ಕೇಂದ್ರ ಸಚಿವ ಸಂಪುಟದಲ್ಲಿ ಕರ್ನಾಟಕದ ಒಂದು ಕೋಟಾ ಖಾಲಿ ಉಳಿದಿದೆ. ಅದನ್ನು ಲಿಂಗಾಯತ ಸಮುದಾಯದ ನಾಯಕರಿಗೆ ನೀಡುವುದು ವರಿಷ್ಠರ ಉದ್ದೇಶವಾಗಿದೆ. ಜೊತೆಗೆ ಜಗದೀಶ್ ಶೆಟ್ಟರ್ ಅವರು ಸುರೇಶ್ ಅಂಗಡಿ ಅವರ ಸಂಬಂಧೀಕರಾಗಿದ್ದು, ಇದು ಕೂಡ ಅವರ ಗೆಲುವಿಗೆ ಸಹಕಾರಿ ಎಂಬುದು ಬಿಜೆಪಿ ವರಿಷ್ಠರ ಲೆಕ್ಕಾಚಾರವಾಗಿದೆ ಎನ್ನಲಾಗಿದೆ.

Edited By : Vijay Kumar
PublicNext

PublicNext

08/12/2020 08:11 pm

Cinque Terre

129.47 K

Cinque Terre

38

ಸಂಬಂಧಿತ ಸುದ್ದಿ