ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾರಕೋಲು ಚಳುವಳಿ ಮಾಡುವಂತದ್ದು ಏನೂ ಆಗಿಲ್ಲ: ಬಿ.ಸಿ.ಪಾಟೀಲ್

ಬೆಂಗಳೂರು: ಕೃಷಿ ಕಾಯ್ದೆಗಳ ಕುರಿತು ರೈತರಿಗೆ ಮಾಹಿತಿ ನೀಡಲು ಪಶುಸಂಗೋಪನೆ, ಸಹಕಾರಿ, ಕಂದಾಯ ಸಚಿವರು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದೇವೆ. ಈ ಮೂಲಕ ರೈತರ ಕಾಯಿದೆ ತಿದ್ದುಪಡಿಯಿಂದಾಗುವ ಅನುಕೂಲತೆ ಬಗ್ಗೆ ರೈತರಲ್ಲಿ ಮನವರಿಕೆ ಮಾಡಿಕೊಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಈಗಾಗಲೇ ಒಂದು ಸುತ್ತು ಪ್ರವಾಸ ಮಾಡಿದ್ದೇವೆ. ಈ ವೇಳೆ ಯಾವ ರೈತರಿಂದಲೂ ಕಾಯ್ದೆಗೆ ವಿರೋಧ ಕೇಳಿ ಬಂದಿಲ್ಲ. ವಿಧಾನಸಭೆ ಅಧಿವೇಶನ ನಡೆಯೋವಾಗ ಇಂತಹ ಪ್ರತಿಭಟನೆ ಸಹಜ. ಇದರಿಂದ ಸಾರ್ವಜನಿಕರಿಗೆ ಸುಮ್ಮನೆ ತೊಂದರೆ ಕೊಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕಾಯಿದೆ ಬದಲಾವಣೆ ಇಲ್ಲ. ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಬಗ್ಗೆ ಸ್ಪಷ್ಟ ಪಡಿಸಿದೆ ಎಂದರು.

ಇನ್ನು ರೈತರು ಬಾರುಕೋಲು ಹಿಡಿದು ಚಳುವಳಿ ಮಾಡುವಂಥಹದ್ದೇನಾಗಿಲ್ಲ ಎಂದ ಅವರು, ದೇಶ ಹಾಗೂ ರಾಜ್ಯದ ರೈತರ ಅನುಕೂಲಕ್ಕಾಗಿಯೇ ಕಾಯಿದೆ ತರಲಾಗಿದೆ. ಕಾಂಗ್ರೆಸ್ 2019 ರ ಪ್ರಣಾಳಿಕೆಯಲ್ಲಿ ಎಪಿಎಂಸಿ ರದ್ದುಮಾಡಿ ಮುಕ್ತಮಾರುಕಟ್ಟೆ ಮಾಡುವ ಬಗ್ಗೆ ನೀಡಿದ ಭರವಸೆ ನೀಡಿದ್ದರು. ನಮ್ಮ ಸರ್ಕಾರ ಅವರು ಹೇಳಿದ್ದನ್ನೇ ಮಾಡಿದೆ. ಇದಕ್ಕೆ ಕಾಂಗ್ರೆಸ್‌ನವರು ಮೆಚ್ಚುಗೆ ವ್ಯಕ್ತಪಡಿಸಬೇಕೇ ಹೊರತು ಇದೇ ವಿಷಯಕ್ಕಾಗಿ ರಾಜಕೀಯ ಮಾಡುವುದು ಸರಿಯಲ್ಲ ಎಂದರು.

Edited By : Nagaraj Tulugeri
PublicNext

PublicNext

09/12/2020 12:03 pm

Cinque Terre

60.01 K

Cinque Terre

6

ಸಂಬಂಧಿತ ಸುದ್ದಿ