ಜೈಪುರ: ರಾಜಸ್ಥಾನದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಗೆಲುವು ಸಾಧಿಸಿದೆ. ಬಿಜೆಪಿಯ ಈ ಗೆಲುವಿನಿಂದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಮುಜುಗುರ ಉಂಟಾಗಿದೆ.
4,371 ಪಂಚಾಯತ್ ಸಮಿತಿ ಸ್ಥಾನಗಳ ಪೈಕಿ ಬಿಜೆಪಿ 1,835, ಕಾಂಗ್ರೆಸ್ 1,718 ಸ್ಥಾನಗಳನ್ನು ಗೆದ್ದುಕೊಂಡಿದೆ. ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ 56 ಮಂದಿ, 420 ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜಿಲ್ಲಾ ಪರಿಷತ್ ಒಟ್ಟು 636 ಸ್ಥಾನಗಳ ಪೈಕಿ ಬಿಜೆಪಿ 266, ಕಾಂಗ್ರೆಸ್ 204 ಸ್ಥಾನಗಳನ್ನು ಗೆದ್ದುಕೊಂಡಿದೆ.
ಸಚಿನ್ ಪೈಲಟ್ ಪ್ರತಿನಿಧಿಸುತ್ತಿರುವ ಟೋಂಕ್ ಕ್ಷೇತ್ರದ ಒಟ್ಟು 25 ಸ್ಥಾನಗಳ ಪೈಕಿ ಬಿಜೆಪಿ 15 ಸ್ಥಾನಗಳನ್ನು ಗೆದ್ದುಕೊಂಡರೆ ಕಾಂಗ್ರೆಸ್ 10 ಸ್ಥಾನಗಳನ್ನು ಗೆದ್ದುಕೊಂಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಬಿಜೆಪಿಗೆ ಮತ್ತೆ ಜನ ಬೆಂಬಲ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಗ್ರಾಮೀಣ ಭಾಗಕ್ಕೆ ನೀಡಿದ ಅಭಿವೃದ್ಧಿ ಯೋಜನೆಗಳನ್ನು ಮೆಚ್ಚಿ ಜನ ನಮಗೆ ಮತ ಹಾಕಿದ್ದಾರೆ. ಇದೊಂದು ಐತಿಹಾಸಿಕ ಜಯ ಎಂದು ಬಣ್ಣಿಸಿದ್ದಾರೆ.
PublicNext
09/12/2020 01:35 pm