ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶುದ್ಧ ಕುಡಿಯುವ ನೀರಿನ ಯೋಜನೆಯಲ್ಲಿ ಅಕ್ರಮ: ತನಿಖೆಗೆ ಕ್ರಮ

ಬೆಂಗಳೂರು: ಶುದ್ದ ಕುಡಿಯುವ ನೀರಿನ ಘಟಕ ಯೋಜನೆಯಲ್ಲಿ ಭಾರೀ ಅಕ್ರಮ ನಡೆದಿದೆ. ಇದರ ತನಿಖೆಗಾಗಿ ಜಂಟಿ ಸದನ ಸಮಿತಿ ರಚನೆ ಮಾಡಲಾಗುವುದು. ತನಿಖೆ ನಂತರ ಸದನದಲ್ಲಿ ವರದಿ ಮಂಡಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಬುಧವಾರ ಯಾದಗಿರಿ ವಿಧಾನಸಭಾ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿದರೂ ಯಾವುದೇ ಘಟಕಗಳು ಕಾರ್ಯ ನಿರ್ವಹಣೆ ಮಾಡುತ್ತಿಲ್ಲ ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ್ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ್ದರು. ಇದಕ್ಕೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ, ಯಾವುದೇ ಘಟಕಗಳು ಸಂಪೂರ್ಣವಾಗಿ ಸ್ಥಗಿತಗೊಂಡಿರುವುದು ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದು ಉತ್ತರಿಸಿದರು.

ಈ ವೇಳೆ ಬಿಜೆಪಿ ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ಧ್ವನಿಗೂಡಿಸಿ, 3.50, 4 ಲಕ್ಷಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಲು ಸಾಧ್ಯ. ಆದರೆ ಇದರಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ. ಈ ಕುರಿತಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಜೆಡಿಎಸ್ ಶಾಸಕ ವೆಂಕಟ್ ರಾವ್ ನಾಡಗೌಡ, ಯು.ಟಿ ಖಾದರ್ ಕೂಡಾ ಧ್ವನಿಗೂಡಿಸಿದರು.

ಇದಕ್ಕೆ ಉತ್ತರ ನೀಡಿದ ಕೆ ಎಸ್ ಈಶ್ವರಪ್ಪ, ಈ ಕುರಿತಾಗಿ ಹಿಪ್ಸಾಸ್ ಎಂಬ ಸಂಸ್ಥೆ ತನಿಖೆ ನಡೆಸಿದ್ದ ರಾಜ್ಯದಲ್ಲಿರುವ 18,000 ಶುದ್ಧ ನೀರಿನ ಘಟಕಗಳ ಪೈಕಿ 70 ಶೇಕಡಾ ಘಟಕಗಳು ಸುಸ್ಥಿತಿಯಲ್ಲಿವೆ. 24 ಶೇಕಡಾ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ ಹಾಗೂ 4 ಶೇ ಸಂಪೂರ್ಣ ಸ್ಥಗಿತಗೊಂಡಿವೆ. ಈ ನಿಟ್ಟಿನಲ್ಲಿ ಯಾವ ಸ್ವರೂಪದಲ್ಲಿ ತನಿಖೆ ನಡೆಸಬೇಕೆಂದು ಮಾರ್ಗದರ್ಶನ ಮಾಡಿದರೆ ಆ ರೀತಿಯಲ್ಲಿ ತನಿಖೆ ನಡೆಸುವುದಾಗಿ ತಿಳಿಸಿದರು.

Edited By : Nagaraj Tulugeri
PublicNext

PublicNext

09/12/2020 01:54 pm

Cinque Terre

38.6 K

Cinque Terre

0

ಸಂಬಂಧಿತ ಸುದ್ದಿ