ನವದೆಹಲಿ: ಕೇಂದ್ರ ಸರ್ಕಾರ ಬುಧವಾರ ಕಳುಹಿಸಿರುವ ಕರಡು ಪ್ರಸ್ತಾವನೆ ಕುರಿತು ಚರ್ಚಿಸಲು ರೈತ ಸಂಘಟನೆಗಳು ಸಭೆ ನಡೆಸಲಿವೆ. ಈ ಸಭೆಯ ಬಳಿಕ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕೈಟ್ ತಿಳಿಸಿದ್ದಾರೆ.
ಇಂದು ಸಂಜೆಯ ವೇಳೆಗೆ ಈ ವಿಷಯಗಳ ಬಗ್ಗೆ ಸ್ವಲ್ಪ ಸ್ಪಷ್ಟತೆ ನೀಡುವ ಮೂಲಕ ಗೊಂದಲಗಳನ್ನು ನಿವಾರಿಸುವ ಭರವಸೆ ಇದೆ. ಸುಮಾರು 40 ರೈತ ಸಂಘಟನೆಗಳೊಂದಿಗೆ ಬುಧವಾರ ನಡೆಸಬೇಕಿದ್ದ 6ನೇ ಸುತ್ತಿನ ಮಾತುಕತೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಮಂಗಳವಾರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಡೆದ ಮಾತುಕತೆ ವಿಫಲವಾದ ನಂತರ ರೈತ ಮುಖಂಡರು ಮಾತುಕತೆಯಲ್ಲಿ ಭಾಗಿಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಇಂದು ಕೇಂದ್ರ ಸರ್ಕಾರ ಮಾತುಕತೆ ರದ್ದುಪಡಿಸಿದೆ ಎಂದು ತಿಳಿಸಿದರು.
PublicNext
09/12/2020 05:33 pm