ಬೆಂಗಳೂರು: ಭಾರೀ ಚರ್ಚೆಗೆ ಕಾರಣವಾಗಿದ್ದ ಗೋ ಹತ್ಯೆ ನಿಷೇಧ ಮಸೂದೆಗೆ ವಿಧಾನಸಭೆಯಲ್ಲಿಂದು ಅಂಗೀಕಾರ ದೊರೆತ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ (ನಾಳೆ) ತುರ್ತು ಶಾಸಕಾಂಗ ಸಭೆ ಕರೆದಿದ್ದಾರೆ.
ವಿಧಾನಸಭೆಯಲ್ಲಿ ಮಂಡನೆಯಾದ ಗೋ ಹತ್ಯೆ ನಿಷೇಧ ವಿಧೇಯಕಕ್ಕೆ ಕಾಂಗ್ರೆಸ್ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಸದನದ ಬಾವಿಗೆ ಇಳಿದು ಪ್ರತಿಭಟನೆಯನ್ನೂ ನಡೆಸಿದರು. ಆದಾಗ್ಯೂ ಈ ವಿಧೇಯಕಕ್ಕೆ ಒಪ್ಪಿಗೆ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನಾಳೆ ತುರ್ತು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಿ ಇರುವಂತೆ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಬೆಳಗ್ಗೆ 10:30ಕ್ಕೆ ವಿಧಾನಸೌಧದ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕಾಂಗ ಸಭೆ ನಡೆಯಲಿದೆ. ಈ ವೇಳೆ ಗೋ ಹತ್ಯೆ ನಿಷೇಧ ವಿಧೇಯಕದ ಬಗ್ಗೆ ಪ್ರತಿಭಟನೆ ನಡೆಸುವ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.
PublicNext
09/12/2020 10:10 pm