ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಮಲತಾ ನಡೆ ನಿಗೂಢ: ಕ್ಷೇತ್ರದಲ್ಲಿ ಭುಗಿಲೆದ್ದ ಅಸಮಾಧಾನ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ್ದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಮೇಲೆ ಅಸಮಾಧಾನ ಭುಗಿಲೆದ್ದಿದೆ. ಪ್ರಸ್ತುತ ಗ್ರಾಮ ಪಂಚಾಯತಿ ಚುನಾವಣೆ ವಿಷಯದಲ್ಲಿ ಅವರು ತಟಸ್ಥವಾಗಿದ್ದಾರೆ. ಇದು ಅಸಮಾಧಾನಕ್ಕೆ ಕಾರಣವಾಗಿದೆ. ಜೊತೆಗೆ ಕ್ಷೇತ್ರದ ಕಡೆ ಇತ್ತೀಚೆಗೆ ಅವರು ಬಂದೇ ಇಲ್ಲ ಎನ್ನುವ ಅಸಮಾಧಾನ ಕ್ಷೇತ್ರದ ಜನರಲ್ಲಿದೆ.

ಗ್ರಾಮ ಪಂಚಾಯಿತಿ ಚುನಾವಣೆ ಸ್ಥಳೀಯ ನಾಯಕತ್ವವನ್ನು ಹುಟ್ಟುಹಾಕುವ ಚುನಾವಣೆ. ಭವಿಷ್ಯದಲ್ಲಿ ಲೋಕಸಭೆ-ವಿಧಾನಸಭೆಗೆ ಸ್ಪರ್ಧಿಸುವವರು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುವುದು ಸಾಮಾನ್ಯವಾಗಿದೆ. ಬೂತ್‌ ಮಟ್ಟದಲ್ಲಿ ಬಲವರ್ಧನೆಗೆ ಗ್ರಾಪಂ ಚುನಾವಣೆಯೇ ಆಧಾರಸ್ತಂಭವಾಗಿದೆ. ಇಂತಹ ಹೊತ್ತಿನಲ್ಲಿ ಸುಮಲತಾ ಅಂಬರೀಶ್‌ ನಿಲುವನ್ನು ಪ್ರಕಟಿಸದೆ ಮೌನಕ್ಕೆ ಶರಣಾಗಿರುವುದು ದೊಡ್ಡ ಪ್ರಶ್ನೆಯಾಗಿದೆ.

ಗ್ರಾಪಂ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಚುನಾವಣಾ ಪೂರ್ವಭಾವಿ ಸಭೆಗಳನ್ನು ನಡೆಸಿ ಪಕ್ಷದ ಕಾರ್ಯಕರ್ತರಿಗೆ, ಬೆಂಬಲಿಗರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಆದರೆ, ಚುನಾವಣೆ ಘೋಷಣೆಯಾದ ದಿನದಿಂದಲೂ ಸಂಸದೆ ಸುಮಲತಾ ಅಂಬರೀಶ್‌ ಜಿಲ್ಲೆಯ ಕಡೆ ಮುಖ ಮಾಡದಿರುವುದು ಕಾಂಗ್ರೆಸ್‌, ಬಿಜೆಪಿ ಹಾಗೂ ರೈತಸಂಘದ ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಅಖಾಡ ಪ್ರವೇಶಿಸಿದ್ದ ಸುಮಲತಾ ಅಂಬರೀಶ್‌ ಅವರಿಗೆ ಕಾಂಗ್ರೆಸ್‌, ಬಿಜೆಪಿ, ರೈತಸಂಘದ ಕಾರ್ಯಕರ್ತರು ಒಗ್ಗಟ್ಟಾಗಿ ಶ್ರಮಿಸಿ ಗೆಲುವನ್ನು ತಂದುಕೊಟ್ಟಿದ್ದರು. ತಮ್ಮ ಲೋಕಸಭಾ ಪ್ರವೇಶಕ್ಕೆ ಕಾರಣರಾದ ಕಾರ್ಯಕರ್ತರು, ಬೆಂಬಲಿಗರಿಗೆ ಗ್ರಾಪಂ ಚುನಾವಣೆಯಲ್ಲಿ ಶಕ್ತಿ ತುಂಬುವುದಕ್ಕೆ ಸುಮಲತಾ ಮುಂದಾಗದಿರುವುದು ಹಲವರಲ್ಲಿ ಬೇಸರ ಮೂಡಿಸಿದೆ.

Edited By : Nagaraj Tulugeri
PublicNext

PublicNext

10/12/2020 04:03 pm

Cinque Terre

46.55 K

Cinque Terre

6