ನವದೆಹಲಿ: ನೂತನ ಸಂಸತ್ ಭವನ ಕಟ್ಟಡದ ಭೂಮಿ ಪೂಜೆ ನೆರವೇರಿಸಿರುವ ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್ ಪಕ್ಷ ತರಾಟೆಗೆ ತೆಗೆದುಕೊಂಡಿದೆ. ರೈತರು ತಮ್ಮ ಹಕ್ಕುಗಳಿಗಾಗಿ ಬೀದಿಯಲ್ಲಿ ಹೋರಾಟ ನಡೆಸುತ್ತಿರುವಾಗ ಪ್ರಧಾನಿ ತಮಗಾಗಿ ಅರಮನೆ ಕಟ್ಟಿಕೊಳ್ಳುವ ತವಕದಲ್ಲಿದ್ದಾರೆ ಎನ್ನುವ ಮೂಲಕ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, ಕಳೆದ 16 ದಿನಗಳಿಂದ ರೈತರು ದೆಹಲಿ ಗಡಿಯಲ್ಲಿ ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಪ್ರಧಾನಿ ಮೋದಿ ಮಾತ್ರ ಸೆಂಟ್ರಲ್ ವಿಸ್ಟಾ ಯೋಜನೆ ಹೆಸರಲ್ಲಿ ತಮಗಾಗಿ ಅರಮನೆ ಕಟ್ಟಿಕೊಳ್ಳುವ ಸಂಭ್ರಮದಲ್ಲಿ ಮುಳುಗಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಂಸತ್ ಭವನ ಎನ್ನುವುದು ಪ್ರಜಾಪ್ರಭುತ್ವ ರಕ್ಷಿಸುವ, ಸಂವಿಧಾನವನ್ನು ಗೌರವಿಸುವ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸಮಾನತೆಯನ್ನು ಒದಗಿಸುವ ಪವಿತ್ರ ಸ್ಥಳ. ಆದರೆ ಪ್ರಧಾನಿ ಮೋದಿ ಪ್ರಸ್ತುತ ಸಂಸತ್ತಿನ ಬದಲು ಭವ್ಯ ಬಂಗಲೆ ಕಟ್ಟಲು ಹೊರಟಿದ್ದಾರೆ ಎಂದು ಸುರ್ಜೆವಾಲಾ ಕಿಡಿಕಾರಿದ್ದಾರೆ.
PublicNext
10/12/2020 06:18 pm