ದೇವನಹಳ್ಳಿ: ಬಿಜೆಪಿ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಜಾರಿ ಮಾಡಿದೆ. ಇದರ ಸಮರ್ಥನೆಗಾಗಿ ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ಸಖ್ಯ ಬೆಳೆಸಿಕೊಂಡಿದೆ. ಈ ಮೂಲಕ ಎರಡೂ ಪಕ್ಷಗಳು ರೈತ ವಿರೋಧಿಯಾಗಿವೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಕೃಷ್ಣಭೈರೇಗೌಡ ಹೇಳಿದ್ದಾರೆ.
ದೇವನಹಳ್ಳಿ ತಾಲೂಕಿನ ಚಿಕ್ಕಸಣ್ಣೆ ಬಳಿ ಇರುವ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಗ್ರಾಪಂ ಚುನಾವಣೆ ಸಿದ್ಧತಾ ಸಭೆಯಲ್ಲಿ ಮಾತನಾಡಿ, ಜೆಡಿಎಸ್-ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ರೈತ ವಿರೋಧಿ ನೀತಿ, ರೈತರ ಜಮೀನನ್ನು ಯಾರು ಬೇಕಾದರೂ ಎಷ್ಟು ಬೇಕಾದರೂ ಕೊಳ್ಳಬಹುದು ಎಂದು ಟೀಕಿಸಿದರು. ವಿದ್ಯುತ್ ಖಾಸಗೀಕರಣ, ಕೊರೊನಾ ಸಂಕಷ್ಟದಲ್ಲಿ ಅನೇಕ ಕಾರ್ಮಿಕರು ಕೆಲಸ ಕಳೆದುಕೊಂಡು ಅಲೆದಾಡುವ ಪರಿಸ್ಥಿತಿ ಉದ್ಬವವಾಗಿದೆ. ತಾಲೂಕಿನಲ್ಲಿ ಕಾಂಗ್ರೆಸ್‌ಗೆ ಜೆಡಿಎಸ್ ಎದುರಾಳಿಗಳಾಗಿ ಪ್ರಬಲ ಸ್ಪರ್ಧೆ ಒಡ್ಡಬಹುದು. ಆದ್ದರಿಂದ ಬಹಳ ಎಚ್ಚರಿಕೆಯಿಂದ ಗ್ರಾಪಂ ಚುನಾವಣೆಗಳಲ್ಲಿ ಮತದಾರನ ಒಲವನ್ನು ಪಡೆಯಬೇಕಾಗುತ್ತದೆ ಎಂದು ಗ್ರಾಪಂಗಳಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳಿಗೆ ಕಿವಿಮಾತು ಹೇಳಿದರು.
PublicNext
12/12/2020 08:38 am