ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಧೇಯಕಕ್ಕೆ ವಿರೋಧ ಪಕ್ಷಗಳ ಅಡ್ಡಿ: ಗೋಹತ್ಯೆ ನಿಷೇಧಕ್ಕೆ ಸುಗ್ರೀವಾಜ್ಞೆ

ಬೆಂಗಳೂರು: ವಿಧಾನಪರಿಷತ್ತಿನಲ್ಲಿ ವಿಧೇಯಕ ಅಂಗೀಕಾರಕ್ಕೆ ವಿಪಕ್ಷಗಳು ಅಡ್ಡಿ ಮಾಡಿದ ಕಾರಣಕ್ಕೆ ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಶುಕ್ರವಾರ ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಗೋಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್ತಿನ ಕಲಾಪ ಸಲಹಾ ಸಮಿತಿಯಲ್ಲಿ ಡಿ.15ರವರೆಗೆ ಸದನದ ಕಲಾಪ ನಡೆಸುವಂತೆ ತೀರ್ಮಾನಿಸಲಾಗಿತ್ತು. ಆ ಸಭೆಯಲ್ಲಿ ಸಭಾಪತಿಗಳು ಸಹ ಇದ್ದರು. ಆದರೆ ಈಗ ಏಕಾಏಕಿ ಸದನವನ್ನು ಸಭಾಪತಿಗಳು ಮುಂದೂಡಿಕೆ ಮಾಡಿದ್ದು ಸರಿಯಲ್ಲ. ಸದನ ಮುಂದೂಡುವ ಅಧಿಕಾರವೂ ಅವರಿಗಿಲ್ಲ. ಹಾಗಾಗಿ ಮಂಗಳವಾರ ಮತ್ತೆ ಸದನ ನಡೆಸುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು. ಈ ಮೂಲಕ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರಕ್ಕೆ ಕೊನೆಯ ಪ್ರಯತ್ನ ನಡೆಸುವ ಪರೋಕ್ಷ ಸುಳಿವು ನೀಡಿದರು.

‘ಶ್ರದ್ಧಾ ಭಕ್ತಿಯಿಂದ ಗೋ ಮಾತೆಗೆ ಪೂಜೆ ಸಲ್ಲಿಸಿದ್ದೇವೆ. ಹಿಂದೂ ಧರ್ಮದಲ್ಲಿ ಗೋವುಗಳನ್ನು ಅತ್ಯಂತ ಪೂಜ್ಯ ಭಾವದಿಂದ ಕಾಣುವುದು ಜಗತ್ತಿಗೆ ಗೊತ್ತಿರುವ ಸಂಗತಿ. ಕೃಷಿ ಪ್ರಧಾನ ಭಾರತದಲ್ಲಿ ಪಶು ಸಂಗೋಪನೆ ಕೃಷಿಕರಿಗೆ ಆದಾಯ ನೀಡುವ ಉಪ ಕಸುಬಾಗಿದೆ. ಕೃಷಿ ಚಟುವಟಿಕೆಗಳಿಗೆ ರಾಸುಗಳನ್ನು ಬಳಸಲಾಗುತ್ತದೆ. ಹೀಗಾಗಿ ನಮ್ಮ ರಾಜ್ಯದ ಗೋ ಸಂಪತ್ತಿನ ರಕ್ಷಣೆಗೆ ಸರ್ಕಾರ ಕಾನೂನು ಜಾರಿಗೊಳಿಸಿದೆ’ ಎಂದು ಹೇಳಿದರು.

Edited By : Nagaraj Tulugeri
PublicNext

PublicNext

12/12/2020 11:02 am

Cinque Terre

67.1 K

Cinque Terre

3

ಸಂಬಂಧಿತ ಸುದ್ದಿ