ಬೆಂಗಳೂರು: ಶಾಲಾ ಕಾಲೇಜು ಆರಂಭಕ್ಕೆ ಡಿಸೆಂಬರ್ ಕೊನೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ‘ಈಗಾಗಲೇ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳನ್ನು ಆರಂಭಿಸಲಾಗಿದೆ. ಡಿಸೆಂಬರ್ ಕೊನೆಯ ವಾರದ ಸೋಂಕಿನ ಪ್ರಮಾಣ ವನ್ನು ಪರಿಶೀಲಿಸಿ ನಂತರ 10 ಮತ್ತು 12 ನೇ ತರಗತಿಗಳಿಗೂ ಶಾಲೆ ಆರಂಭಿಸಬಹುದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ.
PublicNext
12/12/2020 01:33 pm