ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಡಿಹಳ್ಳಿ ವಿರುದ್ಧ ಬಿಎಸ್‌ವೈ ಕಿಡಿ, ಎಚ್‌ಡಿಕೆ ಪರ ಬ್ಯಾಟಿಂಗ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯ ರಾಜಕೀಯದಲ್ಲಿ ಪರಸ್ಪರ ಬೆಂಬಲದ ಹೆಜ್ಜೆ ಇಡುತ್ತಿದ್ದಾರೆ ಎನ್ನಲಾಗುತ್ತಿದೆ. ಈಗ ಇದಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದೆ.

ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಅವರು ಸಾರಿಗೆ ನೌಕರರನ್ನು ದುರುದ್ದೇಶದಿಂದ ಎತ್ತಿಕಟ್ಟುತ್ತಿದ್ದಾರೆ. ಅಷ್ಟೇ ಅಲ್ಲದೆ ಎಚ್‌.ಡಿ ಕುಮಾರಸ್ವಾಮಿ ಅವರ ವಿರುದ್ಧ ಆಡಿರುವ ಲಘುವಾದ ಮಾತುಗಳು ಸರಿಯಲ್ಲ ಎಂದು ಸಿಎಂ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಶನಿವಾರ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ, 'ಸಾರಿಗೆ ನೌಕರರ ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಸಮಸ್ಯೆ ಬಗೆಹರಿಸಲು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಸೂಚನೆ ನೀಡಲಾಗಿದೆ. ಆದರೆ ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಅವರು ದುರುದ್ದೇಶದಿಂದ ಕೆಲವು ನೌಕರರನ್ನು ಎತ್ತಿಕಟ್ಟಿ, ಮುಷ್ಕರ ನಡೆಸಲು ಮತ್ತು ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದಿಸಿದ್ದಾರೆ. ಎಚ್‌.ಡಿ ಕುಮಾರಸ್ವಾಮಿ ಅವರ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ್‌ ಅತ್ಯಂತ ಲಘುವಾಗಿ ಮಾತಾಡಿರುವುದು ಖಂಡನೀಯ' ಎಂದು ಹೇಳಿದ್ದಾರೆ.

Edited By : Vijay Kumar
PublicNext

PublicNext

12/12/2020 03:53 pm

Cinque Terre

85.11 K

Cinque Terre

12

ಸಂಬಂಧಿತ ಸುದ್ದಿ