ಬೆಂಗಳೂರು: ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ನಾಳೆ ಡಿಸೆಂಬರ್ ೧೧ರಿಂದ ಖಾಸಗಿ ವಾಹನಗಳನ್ನು ಬಳಸಿಕೊಂಡು ಸೇವೆ ನೀಡಲು ಸರ್ಕಾರ ನಿರ್ಧರಿಸಿದೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ಸರ್ಕಾರಿ ದರದಲ್ಲೇ ಖಾಸಗಿ ವಾಹನಗಳನ್ನು ಓಡಿಸುತ್ತೇವೆ. ಈ ಸಂಬಂಧ ಅಧಿಕಾರಿಗಳೊಂದಿಗೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರತಿಭಟನಾನಿರತ ಸಾರಿಗೆ ನೌಕರರ ಬೇಡಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, 'ನಿಮ್ಮ ಬೇಡಿಕೆಗಳನ್ನು ಸಹಾನುಭೂತಿಯಿಂದ ಆಲಿಸುತ್ತೇವೆ. ಧರಣಿ ಕೈ ಬಿಟ್ಟು ಮಾತುಕತೆಗೆ ಬನ್ನಿ. ಸಿಬ್ಬಂದಿ ಜೊತೆಗೆ ಕುಳಿತು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಿದ್ಧರಿದ್ದೇವೆ ಎಂದು ತಿಳಿಸಿದರು.
PublicNext
12/12/2020 04:39 pm