ಬೆಂಗಳೂರು: ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷರಾಗಿ ರೈತಪರ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಸಾರಿಗೆ ನೌಕರರು ಒಮ್ಮತದ ಮೂಲಕ ಅಧಿಕೃತವಾಗಿ ಆಯ್ಕೆ ಮಾಡಿದ್ದಾರೆ.
ಈ ಘೋಷಣೆಯನ್ನು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಪತ್ರ ರವಾನಿಸಲು ನೌಕರರು ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ ಮುಂದೆ ಏನೇ ಚರ್ಚೆ ನಡೆಸದರೂ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮಾತುಕತೆ ನಡೆಸುವಂತೆ ಪತ್ರದಲ್ಲಿ ನೌಕರರು ಉಲ್ಲೇಖಿಸಿದ್ದಾರೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಚಂದ್ರು ಅವರು, ನಮ್ಮ ಒಕ್ಕೂಟದ ಗೌರವಾಧ್ಯಕ್ಷರನ್ನಾಗಿ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ನೇಮಕ ಮಾಡಿದ್ದೇವೆ. ಅವರು ನಮ್ಮ ಹೋರಾಟದ ಮುಂದಾಳತ್ವ ವಹಿಸುತ್ತಿದ್ದಾರೆ. ಮಾತುಕತೆಗೆ ಕರೆಯುವುದಾದರೆ ಸರ್ಕಾರ ಅವರನ್ನೇ ಕರೆಯಲಿ ಎಂದು ತಿಳಿಸಿದ್ದಾರೆ.
PublicNext
12/12/2020 09:31 pm