ಬೆಂಗಳೂರು: ಕೋಲಾರ ಜಿಲ್ಲೆಯ ವಿಸ್ಟ್ರನ್ ಕಂಪನಿಯಲ್ಲಿ ಆಗಿರುವ ಅಹಿತಕರ ಘಟನೆಯು ಮರುಕಳಿಸದಂತೆ ರಾಜ್ಯ ಸರ್ಕಾರ ಬಿಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಂಪನಿಗೆ ಅಗತ್ಯವಿರುವ ರಕ್ಷಣೆ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ. ಈ ಬಗ್ಗೆ ತನಿಖೆ ನಡೆಸಿ ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ವಿದೇಶಿ ಕಂಪನಿಗಳು ನಮ್ಮ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗಿದ್ದು ಸ್ನೇಹಮಯ ವಾತಾವರಣದಲ್ಲಿ ವ್ಯವಹಾರ ಮಾಡುತ್ತಿದ್ದಾರೆ. ಫಾರ್ಚೂನ್ 500 ಕಂಪನಿಗಳಲ್ಲಿ 400 ಕಂಪನಿಗಳು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಕಂಪನಿಗಳು ಹಲವಾರು ವರ್ಷಗಳಿಂದ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಆರ್ಥಿಕ ಹಾಗೂ ಕೈಗಾರಿಕಾ ಅಭಿವೃದ್ದಿಗೆ ಸಾಕಷ್ಟು ಕೊಡುಗೆಯನ್ನು ನೀಡಿವೆ ಎಂದರು.
PublicNext
12/12/2020 11:21 pm