ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಧಾನ ಯಶಸ್ವಿ: ಸಾರಿಗೆ, ಸರ್ಕಾರ ಸಂಘರ್ಷಕ್ಕೆ ತೆರೆ

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ಸಂಧಾನ ಯಶಸ್ವಿಯಾಗಿದ್ದು, ಇಂದು ರಾತ್ರಿಯಿಂದಲೇ ಸರ್ಕಾರಿ ಬಸ್‌ಗಳು ರಸ್ತೆಗೆ ಇಳಿಯಲಿವೆ.

ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂಬ ಬೇಡಿಕೆಯನ್ನು ಸರ್ಕಾರ ಒಪ್ಪಿಲ್ಲ. ಬದಲಾಗಿ 8 ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ನೀಡಿದೆ. ಹೀಗಾಗಿ ಕಳೆದ ಮೂರು ದಿನಗಳಿಂದ ಸ್ಥಗಿತಗೊಂಡಿದ್ದ ಸಂಚಾರ ವ್ಯವಸ್ಥೆ ಇಂದು ರಾತ್ರಿಯಿಂದ ಪುನಃ ಆರಂಭವಾಗಲಿದೆ.

ಸರ್ಕಾರದ ಘೋಷಣೆಗಳು ಏನು?

1. ನಿಗಮದ ನೌಕರರಿಗೆ ಆರೋಗ್ಯ ಸಂಜೀವಿನಿ ವಿಮಾ ಯೋಜನೆ ಅಳವಡಿಸಲು ತೀರ್ಮಾನ.

2. ಅಂತರ್ ನಿಗಮ ವರ್ಗಾವಣೆ ಕುರಿತು ಸೂಕ್ತ ನೀತಿ ರಚಿಸಲು ತೀರ್ಮಾನ.

3. ಕೋವಿಡ್-19 ಸೋಂಕಿನಿಂದ ಮೃತ ಸಿಬ್ಬಂದಿಯ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ.

4. ನಿಗಮದಲ್ಲಿ ಹೆಚ್.ಆರ್.ಎಂ.ಎಸ್. (ಮಾನವ ಸಂಪನ್ಮೂಲ) ವ್ಯವಸ್ಥೆ ಜಾರಿ.

5. ನೌಕರರ ತರಬೇತಿ ಅವಧಿ 2 ರಿಂದ ಒಂದು ವರ್ಷಕ್ಕೆ ಇಳಿಕೆ.

6. ಸಿಬ್ಬಂದಿಯ ಕರ್ತವ್ಯ ನಿರ್ವಹಿಸಿದ ಸಂದರ್ಭದಲ್ಲಿ ಭತ್ಯೆ ನೀಡಲು ನಿರ್ಧಾರ.

7. ವೇತನ ಪರಿಷ್ಕರಣೆ, ಆರನೇ ವೇತನ ಆಯೋಗದ ಜಾರಿ ನಡೆಸುವ ಸಂಬಂಧ ಆರ್ಥಿಕ ಇಲಾಖೆ ಜೊತೆ ಚರ್ಚೆ ನಡೆಸಿ ತೀರ್ಮಾನ.

8. ಘಟಕದ ವ್ಯಾಪ್ತಿಯಲ್ಲಿ ನೌಕರರಿಗೆ ಕಿರುಕುಳ ತಪ್ಪಿಸಲು ಸೂಕ್ತ ಆಡಳಿತ ವ್ಯವಸ್ಥೆ.

Edited By : Vijay Kumar
PublicNext

PublicNext

13/12/2020 07:02 pm

Cinque Terre

88.33 K

Cinque Terre

6