ಬೆಂಗಳೂರು- ಕೆಲವು ವಿಚಾರಗಳಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಸ್ವಂತ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಸರ್ಕಾರದ ಪರ ವಹಿಸಿ ನಿಂತಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದೊಂದಿಗೆ ಏನನ್ನೂ ಚರ್ಚೆ ಮಾಡಿಲ್ಲ. ಅಭಿಪ್ರಾಯ ಪಡೆದಿಲ್ಲ ಎಂದು ಜೆಡಿಎಸ್ ಪಕ್ಷದ ಇತರ ನಾಯಕರು ಅಸಮಾಧಾನಗೊಂಡಿದ್ದಾರೆ.
ಭೂಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಕುಮಾರಸ್ವಾಮಿ, ಪರಿಷತ್ ನಲ್ಲಿ ಬೆಂಬಲಿಸಿದ್ದಾರೆ. ಸಾರಿಗೆ ನೌಕರರ ವಿಚಾರದಲ್ಲೂ ಸರ್ಕಾರದ ಪರ ನಿಂತಿದ್ದಾರೆ. ಬಿಜೆಪಿಯೊಂದಿಗೆ ಜೆಡಿಎಸ್ ಸಖ್ಯ ಬೆಳೆಸಿಕೊಂಡಿದೆ. ಬೆಳಿಗ್ಗೆ ಒಂದು, ಸಂಜೆ ಒಂದು ನಿಲುವು ತಾಳುತ್ತಿರುವುದು ಜೆಡಿಎಸ್ ಶಾಸಕರಲ್ಲಿ ಭಿನ್ನಮತಕ್ಕೆ ಕಾರಣವಾಗಿದೆ.
ಪಕ್ಷದಲ್ಲಿನ ಈ ಎಲ್ಲ ಗೊಂದಲಗಳನ್ನು ಬಗೆಹರಿಸಲು ಹಿರಿಯ ನಾಯಕ ದೇವೇಗೌಡರೇ ಅಖಾಡಕ್ಕಿಳಿಯಲಿದ್ದಾರೆ. ಜೆಡಿಎಸ್ ಪಕ್ಷ ರೈತ ವಿರೋಧಿ ಎಂಬ ಸಾರ್ವಜನಿಕ ಅಭಿಪ್ರಾಯಕ್ಕೆ ತೆರೆ ಎಳೆಯಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
PublicNext
14/12/2020 08:07 am