ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಡಿಹಳ್ಳಿ ಸರ್ಕಾರದ ಮೇಲೆ ಬ್ಲಾಕ್ ಮೇಲ್ ಮಾಡ್ತಿದ್ದಾರೆ

ಬೆಂಗಳೂರು: ಸಾರಿಗೆ ನೌಕರರ ಹೋರಾಟಕ್ಕೆ ಬೆಂಬಲವಾಗಿ ನಿಂತಿರುವ ರೈತ ಹೋರಾಟಗಾರ ಕೋಡಹಳ್ಳಿ ಚಂದ್ರಶೇಖರ್ ವಿರುದ್ಧ ಹಲವು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರಿಗೆ ನೌಕರರನ್ನು ದುರ್ಬಳಕೆ ಮಾಡಿಕೊಂಡು ಕೋಡಿಹಳ್ಳಿ ಚಂದ್ರಶೇಖರ್ ಅವರು ಸರ್ಕಾರದ ಮೇಲೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.‘ಒಬ್ಬ ವ್ಯಕ್ತಿಯ ಸ್ವಪ್ರತಿಷ್ಠೆಗೆ ಸಾರಿಗೆ ನಿಗಮಗಳ ಭವಿಷ್ಯ ಹಾಳಾಗುವುದನ್ನು ತಡೆದು ಅವುಗಳ ರಕ್ಷಣೆಗೆ ಸರ್ಕಾರ ಸಿದ್ಧವಾಗಿದೆ’ ಎಂದೂ ಬೊಮ್ಮಾಯಿ ಹೇಳಿದ್ದಾರೆ.

‘ರೈತ ನಾಯಕರು ಎನಿಸಿಕೊಂಡಿರುವ ಈ ವ್ಯಕ್ತಿಗೆ ಸಾರಿಗೆ ವ್ಯವಸ್ಥೆ ಹಾಗೂ ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಅರಿವಿಲ್ಲ. ತನಗೆ ಗೊತ್ತಿಲ್ಲದ ವಿಷಯಗಳ ಬಗ್ಗೆ ಮೂಗು ತೂರಿಸುವುದು ಎಷ್ಟು ಸಮಂಜಸ?’ ಎಂದು ಜನರು ಕೇಳುತ್ತಿರುವ ಪ್ರಶ್ನೆಗೆ ಕೋಡಿಹಳ್ಳಿ ಮೊದಲು ಉತ್ತರ ನೀಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ.

‘ತಮ್ಮದಲ್ಲದ ಹೋರಾಟದ ಚುಕ್ಕಾಣಿ ಹಿಡಿದು ಪ್ರಚಾರ ಗಿಟ್ಟಿಸಿಕೊಳ್ಳುತ್ತಿರುವ ಕೋಡಿಹಳ್ಳಿ ಚಂದ್ರಶೇಖರ್, ಸರ್ಕಾರದ ವಿರುದ್ಧ ಸಾರಿಗೆ ನೌಕರರನ್ನು ಎತ್ತಿಕಟ್ಟಿದ್ದು ಅವರ ಘನತೆಗೆ ತಕ್ಕದ್ದಲ್ಲ’ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಕಿಡಿಕಾರಿದ್ದಾರೆ.

Edited By : Nagaraj Tulugeri
PublicNext

PublicNext

14/12/2020 08:30 am

Cinque Terre

88.41 K

Cinque Terre

12