ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದ ಹೊರಟ್ಟಿ: ಯಾಕೆ ಹೀಗಂದ್ರು?

ಧಾರವಾಡ: ಶೈಕ್ಷಣಿಕ ಸಂಸ್ಥೆಗಳಿಗೆ ಅನುದಾನ ಒದಗಿಸಬೇಕೆಂದು ಧಾರವಾಡದಲ್ಲಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯುತ್ತಿದೆ. ಕಳೆದ ಹತ್ತು ದಿನಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಸರ್ಕಾರದಿಂದ ಯಾವುದೇ ಭರವಸೆ ದೊರೆತಿಲ್ಲ. ಈ ನಡುವೆ ಡಿ.14ರಂದು ಶಿಕ್ಷಣ ಸಚಿವರು ಸಭೆ ಕರೆದಿದ್ದು ಅಲ್ಲಿನ ತೀರ್ಮಾನಗಳನ್ನು ಕೇಳಿಕೊಂಡು ಹೋರಾಟಟದ ಮುಂದಿನ ರೂಪುರೇಶೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1987-1995ರ ಸಂಸ್ಥೆಗಳಿಗೆ ಅನುದಾನ ಒದಗಿಸಲಾಗಿದೆ. ಆದರೆ, ಈಗ 1995ರ ನಂತರದ ಸಂಸ್ಥೆಗಳಿಗೆ ಅನುದಾನ ಒದಗಿಸುವುದು ಕಷ್ಟ ಸಾಧ್ಯ. ಸಣ್ಣ-ಪುಟ್ಟ ಸಮಸ್ಯೆಗಳಿಗೆ ಪರಿಹಾರ ಒದಗಿಸಬಹುದು. ಆದರೆ, ಪ್ರಮುಖ ಬೇಡಿಕೆಗಳಿಗೆ ಮನ್ನಣೆ ಸಿಗುವುದು ಕಷ್ಟ ಸಾಧ್ಯ. ಆದರೂ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇವೆ. ಡಿ. 15ರ ವರೆಗೆ ಹೋರಾಟ ಮಾಡಬೇಕಾ ಎಂಬುದನ್ನು ಸೋಮವಾರದ ಸಭೆಯಲ್ಲಿ ತೀರ್ಮಾನಿಸುತ್ತೇವೆ. ಒಂದು ವೇಳೆ ಸಭೆ ಯಶಸ್ವಿ ಆಗದೇ ಹೋದಲ್ಲಿ ಶಾಲೆ ಶುರುವಾದಾಗ ಸರ್ಕಾರಕ್ಕೆ ಬಿಸಿ ತಟ್ಟಿಸಲಾಗುವುದು ಎಂದು ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದ ಹೊರಟ್ಟಿ: ಯಾಕೆ ಹೀಗಂದ್ರು?

ಧಾರವಾಡ: ಶೈಕ್ಷಣಿಕ ಸಂಸ್ಥೆಗಳಿಗೆ ಅನುದಾನ ಒದಗಿಸಬೇಕೆಂದು ಧಾರವಾಡದಲ್ಲಿ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯುತ್ತಿದೆ. ಕಳೆದ ಹತ್ತು ದಿನಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಸರ್ಕಾರದಿಂದ ಯಾವುದೇ ಭರವಸೆ ದೊರೆತಿಲ್ಲ. ಈ ನಡುವೆ ಡಿ.೧೪ರಂದು ಶಿಕ್ಷಣ ಸಚಿವರು ಸಭೆ ಕರೆದಿದ್ದು ಅಲ್ಲಿನ ತೀರ್ಮಾನಗಳನ್ನು ಕೇಳಿಕೊಂಡು ಹೋರಾಟಟದ ಮುಂದಿನ ರೂಪುರೇಶೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1987-1995ರ ಸಂಸ್ಥೆಗಳಿಗೆ ಅನುದಾನ ಒದಗಿಸಲಾಗಿದೆ. ಆದರೆ, ಈಗ 1995ರ ನಂತರದ ಸಂಸ್ಥೆಗಳಿಗೆ ಅನುದಾನ ಒದಗಿಸುವುದು ಕಷ್ಟ ಸಾಧ್ಯ. ಸಣ್ಣ-ಪುಟ್ಟ ಸಮಸ್ಯೆಗಳಿಗೆ ಪರಿಹಾರ ಒದಗಿಸಬಹುದು. ಆದರೆ, ಪ್ರಮುಖ ಬೇಡಿಕೆಗಳಿಗೆ ಮನ್ನಣೆ ಸಿಗುವುದು ಕಷ್ಟ ಸಾಧ್ಯ. ಆದರೂ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇವೆ. ಡಿ. 15ರ ವರೆಗೆ ಹೋರಾಟ ಮಾಡಬೇಕಾ ಎಂಬುದನ್ನು ಸೋಮವಾರದ ಸಭೆಯಲ್ಲಿ ತೀರ್ಮಾನಿಸುತ್ತೇವೆ. ಒಂದು ವೇಳೆ ಸಭೆ ಯಶಸ್ವಿ ಆಗದೇ ಹೋದಲ್ಲಿ ಶಾಲೆ ಶುರುವಾದಾಗ ಸರ್ಕಾರಕ್ಕೆ ಬಿಸಿ ತಟ್ಟಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

Edited By : Nagaraj Tulugeri
PublicNext

PublicNext

14/12/2020 10:48 am

Cinque Terre

73.1 K

Cinque Terre

4

ಸಂಬಂಧಿತ ಸುದ್ದಿ