ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪರಿಷತ್ ಇತಿಹಾಸದಲ್ಲಿ ಮೊದಲ ಬಾರಿ ಮರು ಕಲಾಪ: ರಾಜ್ಯಪಾಲರಿಗೆ ಮನವಿ

ಬೆಂಗಳೂರು: ವಿಧಾನ ಪರಿಷತ್ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಮರು ಕಲಾಪ ಮಾಡಲು ಸರ್ಕಾರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

ಅನಿರ್ದಿಷ್ಟಾವಧಿಗೆ ಮುಂದೂಡಿದ ಕಲಾಪವನ್ನು ಮತ್ತೆ ನಡೆಸುವ ಮೂಲಕ ರಾಜ್ಯ ವಿಧಾನ ಪರಿಷತ್ ಇತಿಹಾಸ ಸೃಷ್ಟಿಸಿದೆ.

ಕಳೆದ ಗುರುವಾರ ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದರು.

ಇದೀಗ ಬಿಜೆಪಿ ನಾಯಕರು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಮನವಿ ಸಲ್ಲಿಸಿ ನಾಳೆ ಮತ್ತೆ ವಿಧಾನ ಪರಿಷತ್ ಕಲಾಪ ನಡೆಸಬೇಕೆಂದು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಾಳೆ ವಿಧಾನಪರಿಷತ್ ಕಲಾಪದಲ್ಲಿ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸರ್ಕಾರ ನಿರ್ಧರಿಸಿದೆ.

Edited By : Nirmala Aralikatti
PublicNext

PublicNext

14/12/2020 01:10 pm

Cinque Terre

53.82 K

Cinque Terre

1

ಸಂಬಂಧಿತ ಸುದ್ದಿ