ಜೈಪುರ: ಎಲ್ಲೇಡೆ ಗೆದ್ದು ಬೀಗುತ್ತಿದ್ದ ಬಿಜೆಪಿಗೆ ರಾಜಸ್ಥಾನದಲ್ಲಿ ಭಾರಿ ಹಿನ್ನಡೆಯಾಗಿದೆ.
ರಾಜಸ್ಥಾನದ 50 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಒಟ್ಟು 1,775 ವಾರ್ಡ್ ಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ 620 ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿದೆ.
ಬಿಜೆಪಿ 548 ಹಾಗೂ ಸ್ವತಂತ್ರ ಅಭ್ಯರ್ಥಿಗಳು 595 ಸ್ಥಾನಗಳನ್ನು ಬಾಚಿಕೊಂಡಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಬಹುಜನ ಸಮಾಜ ಪಕ್ಷದ ಏಳು ಅಭ್ಯರ್ಥಿಗಳು, ಸಿಪಿಐ ಹಾಗೂ ಸಿಪಿಎಂನ ತಲಾ ಇಬ್ಬರು ಹಾಗೂ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ(ಆರ್ ಎಲ್ ಪಿ)ಪಕ್ಷ ಒಂದು ಸ್ಥಾನದಲ್ಲಿ ಜಯ ಸಾಧಿಸಿದೆ.
ರಾಜಸ್ಥಾನದ 12 ಜಿಲ್ಲೆಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿತ್ತು ಎಂದು ರಾಜ್ಯ ಚುನಾವಣಾ ಆಯೋಗದ ವಕ್ತಾರರು ತಿಳಿಸಿದ್ದಾರೆ.
ಇನ್ನೂ ಚುನಾವಣಾ ಫಲಿತಾಂಶಕ್ಕೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಂತಸ ವ್ಯಕ್ತ ಪಡಿಸಿ ಎಲ್ಲರಿಗೂ ಅಭಿನಂದನೆ ತಿಳಿಸಿದ್ದಾರೆ.
PublicNext
14/12/2020 02:40 pm